ಜೇವರ್ಗಿಯಲ್ಲಿ ಹಮ್ಮಿಕೊಂಡಿದ್ದ ಮದ್ಯವರ್ಜನ ಶಿಬಿರವನ್ನು ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಉದ್ಘಾಟಿಸಿದರು. ಮಲ್ಲಶೆಟ್ಟೆಪ್ಪಗೌಡ ಹಿರೇಗೌಡ, ಡಾ.ಉಮೇಶ ಶರ್ಮಾ, ಶಾಂತರಾಜ ಪಾಟೀಲ್​ ಇತರರಿದ್ದರು.  
ರಾಜ್ಯ

ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಿ

ಪ್ರಮುಖ ಮುಖ್ಯಾಂಶಗಳು

  • ಶಂಭುಲಿಂಗ ದೇಸಾಯಿ ಕರೆ
  • ಜೇವರ್ಗಿಯಲ್ಲಿ ಮದ್ಯವರ್ಜನ ಶಿಬಿರ
  • ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಿ
ಜೇವರ್ಗಿ: ಮಾದಕ ವ್ಯಸನವೂ ವ್ಯಕ್ತಿಯ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಹೇಳಿದರು. 
ಧರ್ಮಸಿಂಗ್​ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ 2107ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿ, ಯುವಜನತೆ ದೇಶದ ಅಮೂಲ್ಯ ಸಂಪತ್ತಾಗಿದ್ದು, ಅವರ ಉತ್ತಮ ಭವಿಷ್ಯಕ್ಕಾಗಿ ವ್ಯಸನಮುಕ್ತ ಸಮಾಜ ನಿರ್ಮಾಣ ಅಗತ್ಯ. ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.
ಮದ್ಯವರ್ಜನ ಸಮಿತಿ ತಾಲೂಕು ಅಧ್ಯಕ್ಷ ಮಲ್ಲಶೆಟ್ಟೆಪ್ಪಗೌಡ ಹಿರೇಗೌಡ ಮಾತನಾಡಿ, ಪಾಲಕರು ಮನೆಯಲ್ಲಿ ಮಕ್ಕಳ ನಡವಳಿಕೆ ಬಗ್ಗೆ ನಿಗಾವಹಿಸಬೇಕು. ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಎಲ್ಲೆಡೆ ಮದ್ಯವರ್ಜನ ಶಿಬಿರ ನಡೆಯುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಉಮೇಶ ಶರ್ಮಾ, ವಕೀಲರ ಸಂದ ತಾಲೂಕು ಅಧ್ಯಕ್ಷ ಶಾಂತರಾಜ ಪಾಟೀಲ್​, ಪ್ರಮುಖರಾದ ಡಾ.ಪಿ.ಎಂ.ಮಠ, ಪ್ರೇಮಾ ವಿಜಯಕುಮಾರ, ಶಿವಶರಣಪ್ಪ ಪಡಶಟ್ಟಿ, ಲಕ್ಷೀಕಾಂತ ಕುಲಕರ್ಣಿ, ವಸಂತಗೌಡ ಬಿ., ಮಾಲತೇಶ ಎಂ., ರಾಜೇಶ ಕೆ., ರಮೇಶ, ನಿರ್ಮಲಾ, ಶಾಮ್​, ಬಸವರಾಜ, ಮಂಜುನಾಥ, ಈಶ್ವರ, ವೀರೇಶ, ಮಲ್ಲಮ್ಮ, ಲಕ್ಷ$್ಮಣ, ಹಣಮಂತ, ಸುಧಾ ಇತರರಿದ್ದರು.