ಸೈದಾಪುರ ಮಲ್ಹಾರ ಕಾರಡ್ಡಿ ಬಸವಂತರಾಯ ಮತ್ತು ಸಿದ್ದಪ್ಪ ಸ್ಮಾರಕ ವಿದ್ಯಾ ವರ್ಧಕ ಕಲಾ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡ ಕನಕ ದರ್ಶನ ಕಾರ್ಯಕ್ರಮವನ್ನು ಸಂಸ್ಥೆ ಅಧ್ಯಕ್ಷ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ಉದ್ಘಾಟಿಸಿದರು. ಪ್ರಾಚಾರ್ಯ ಜಿ.ಎಂ.ಗುರುಪ್ರಸಾದ, ಲಿಂಗಾರೆಡ್ಡಿ ನಾಯಕ, ಹಂಪಣ್ಣ ಸಜ್ಜನಶೆಟ್ಟಿ, ಕರಬಸಯ್ಯ ದಂಡಿಗಿಮಠ, ಬಸವರಾಜ ಶಿಣ್ಣೂರು ಇತರರಿದ್ದರು.  
ರಾಜ್ಯ

ಕನಕದಾಸರ ತತ್ವಾದರ್ಶ ಅಳವಡಿಸಿಕೊಳ್ಳಿ

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳಿಗೆ ಸಣ್ಣ ಸಿದ್ರಾಮಪ್ಪಗೌಡ ಕರೆ
  • ಸೈದಾಪುರದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ
ಸೈದಾಪುರ: ಕನಕದಾಸರ ಚಿಂತನೆಗಳು ಇಂದಿನ ಸಮಾಜಕ್ಕೆ ಪ್ರಸ್ತುತವಾಗಿದ್ದು, ವಿದ್ಯಾರ್ಥಿಗಳು ಅವರ ಸಾಹಿತ್ಯ, ತತ್ವ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾ ವರ್ಧಕ ಸಂಘದ ಅಧ್ಯಕ್ಷ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ಹೇಳಿದರು.
ಪಟ್ಟಣದ ಮಲ್ಹಾರ ಕಾರಡ್ಡಿ ಬಸವಂತರಾಯ ಮತ್ತು ಸಿದ್ದಪ್ಪ ಸ್ಮಾರಕ ವಿದ್ಯಾವರ್ಧಕ ಕಲಾ ಪದವಿಪೂರ್ವ ಕಾಲೇಜಿನಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕಲಾನಿಕೇತನ ಟ್ರಸ್ಟ್​ ಸಗರ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡ ಕನಕ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕನಕದಾಸರ ಮೌಲ್ಯಯುತ ಕೃತಿಗಳು ಓದಿ ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.
ಡಿಎಲ್​ಇಡಿ ಕಾಲೇಜಿನ ಪ್ರಾಚಾರ್ಯ ಕರಬಸಯ್ಯ ದಂಡಿಗಿಮಠ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಕನಕದಾಸರ ನಿಲುವುಗಳು ಕೇವಲ ಭಕ್ತಿಯ ಆಚರಣೆಗೆ ಸೀಮಿತವಾಗಿರದೆ. ಸಾಮಾಜಿಕ ಅಸಮಾನತೆ ಮೌಡ್ಯ ಮತ್ತು ಕಂದಾಚಾರಗಳ ವಿರುದ್ಧ ತಾರ್ಕಿಕ ಬಂಡಾಯದ ಧ್ವನಿಯಾಗಿದ್ದವು. ಕುರುಡ ನಂಬಿಕೆಯನ್ನು ಒಪ್ಪದೆ ತರ್ಕಕ್ಕೆ ಇಳಿದು ಸತ್ಯಾ ಸತ್ಯತೆ ತಿಳಿಯುವುದರ ಜತೆಗೆ ಕೀರ್ತನೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಸಮಾಜವನ್ನು ಸುಧಾರಣೆ ಮಾಡಿದರು. ಅವರ ವಿಚಾರಧಾರೆಗಳು ಉತ್ತಮ ವ್ಯಕ್ತಿತ್ವವನ್ನು ನಿರ್ಮಾಣ ಮಾಡುತ್ತವೆ ಎಂದು ಎಂದರು.
ಕಾಲೇಜಿನ ಪ್ರಾಂಶುಪಾಲ ಜಿ.ಎಂ.ಗುರುಪ್ರಸಾದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಗುರು ಲಿಂಗಾರೆಡ್ಡಿ ನಾಯಕ, ಹಂಪಣ್ಣ ಸಜ್ಜನಶೆಟ್ಟಿ, ಉಪನ್ಯಾಸಕರಾದ ದೇವಿಂದ್ರ ಪೀರಾ, ಬಸವರಾಜ ಭರಮಶೆಟ್ಟಿ, ಶಾಂತಲ.ಎನ್​, ಅನುರಾಧ, ಇಂದಿರಾ ಆರ್​.ತೂರೆ, ಸದಾಶಿವ, ವಿದ್ಯಾರ್ಥಿಗಳು ಇತರರಿದ್ದರು. ಸಗರದ ಕಲಾನಿಕೇತನ ಟ್ರಸ್ಟ್​ ಅಧ್ಯಕ್ಷ ಬಸವರಾಜ ಶಿಣ್ಣೂರ ಪ್ರಾಸ್ತಾವಿಕ ಮಾತನಾಡಿದರು. ದೈಹಿಕ ಉಪನ್ಯಾಸಕ ರಾಜಶೇಖರ ಪಾಟೀಲ್​ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಚಂದ್ರಶೇಖರ ಡೊಣ್ಣೆಗೌಡ ನಿರೂಪಿಸಿದರು.ಕನಕದಾಸರ ಚಿಂತನೆಗಳು ಇಂದಿನ ಸಮಾಜಕ್ಕೆ ಪ್ರಸ್ತುತವಾಗಿದ್ದು, ವಿದ್ಯಾರ್ಥಿಗಳು ಅವರ ಸಾಹಿತ್ಯ, ತತ್ವ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾ ವರ್ಧಕ ಸಂಘದ ಅಧ್ಯಕ್ಷ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ಹೇಳಿದರು.
ಪಟ್ಟಣದ ಮಲ್ಹಾರ ಕಾರಡ್ಡಿ ಬಸವಂತರಾಯ ಮತ್ತು ಸಿದ್ದಪ್ಪ ಸ್ಮಾರಕ ವಿದ್ಯಾವರ್ಧಕ ಕಲಾ ಪದವಿಪೂರ್ವ ಕಾಲೇಜಿನಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕಲಾನಿಕೇತನ ಟ್ರಸ್ಟ್​ ಸಗರ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡ ಕನಕ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕನಕದಾಸರ ಮೌಲ್ಯಯುತ ಕೃತಿಗಳು ಓದಿ ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.
ಡಿಎಲ್​ಇಡಿ ಕಾಲೇಜಿನ ಪ್ರಾಚಾರ್ಯ ಕರಬಸಯ್ಯ ದಂಡಿಗಿಮಠ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಕನಕದಾಸರ ನಿಲುವುಗಳು ಕೇವಲ ಭಕ್ತಿಯ ಆಚರಣೆಗೆ ಸೀಮಿತವಾಗಿರದೆ. ಸಾಮಾಜಿಕ ಅಸಮಾನತೆ ಮೌಡ್ಯ ಮತ್ತು ಕಂದಾಚಾರಗಳ ವಿರುದ್ಧ ತಾರ್ಕಿಕ ಬಂಡಾಯದ ಧ್ವನಿಯಾಗಿದ್ದವು. ಕುರುಡ ನಂಬಿಕೆಯನ್ನು ಒಪ್ಪದೆ ತರ್ಕಕ್ಕೆ ಇಳಿದು ಸತ್ಯಾ ಸತ್ಯತೆ ತಿಳಿಯುವುದರ ಜತೆಗೆ ಕೀರ್ತನೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಸಮಾಜವನ್ನು ಸುಧಾರಣೆ ಮಾಡಿದರು. ಅವರ ವಿಚಾರಧಾರೆಗಳು ಉತ್ತಮ ವ್ಯಕ್ತಿತ್ವವನ್ನು ನಿರ್ಮಾಣ ಮಾಡುತ್ತವೆ ಎಂದು ಎಂದರು.
ಕಾಲೇಜಿನ ಪ್ರಾಂಶುಪಾಲ ಜಿ.ಎಂ.ಗುರುಪ್ರಸಾದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಗುರು ಲಿಂಗಾರೆಡ್ಡಿ ನಾಯಕ, ಹಂಪಣ್ಣ ಸಜ್ಜನಶೆಟ್ಟಿ, ಉಪನ್ಯಾಸಕರಾದ ದೇವಿಂದ್ರ ಪೀರಾ, ಬಸವರಾಜ ಭರಮಶೆಟ್ಟಿ, ಶಾಂತಲ.ಎನ್​, ಅನುರಾಧ, ಇಂದಿರಾ ಆರ್​.ತೂರೆ, ಸದಾಶಿವ, ವಿದ್ಯಾರ್ಥಿಗಳು ಇತರರಿದ್ದರು. ಸಗರದ ಕಲಾನಿಕೇತನ ಟ್ರಸ್ಟ್​ ಅಧ್ಯಕ್ಷ ಬಸವರಾಜ ಶಿಣ್ಣೂರ ಪ್ರಾಸ್ತಾವಿಕ ಮಾತನಾಡಿದರು. ದೈಹಿಕ ಉಪನ್ಯಾಸಕ ರಾಜಶೇಖರ ಪಾಟೀಲ್​ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಚಂದ್ರಶೇಖರ ಡೊಣ್ಣೆಗೌಡ ನಿರೂಪಿಸಿದರು.