ಮದ್ದೂರು ನಗರದಲ್ಲಿ ಶಾಸಕ ಮಧುಜಿ.ಮಾದೇಗೌಡ ಅವರನ್ನು ನಿವೃತ್ತ ಪ್ರಾಂಶುಪಾಲ ಪುಟ್ಟಲಿಂಗಯ್ಯ, ಅಭಿನಂದಿಸಿದರು. ಡಾ.ಡಿ.ಪಿ.ವಿನುತ್, ಪ್ರೊ.ಎ.ಪೂನಮ್ ಇದ್ದರು.  
ರಾಜ್ಯ

ದಂತ ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಮಧು ಜಿ.ಮಾದೇಗೌಡ
  • ಡೆಂಟಲ್ ಇಂಫ್ಲಾಂಟ್ ಘಟಕ ಹಾಗೂ ದಂತ ಚಿಕಿತ್ಸಾ ಶಿಬಿರ
ಮದ್ದೂರು: ಗ್ರಾಮೀಣ ಜನರು ಮತ್ತು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂಬ ಸದುದ್ದೇಶದಿಂದ ಸೇವಾ ಕಾರ್ಯಗಳನ್ನು ಕೈಗೊಂಡಿರುವ ಫ್ಯಾಮಿಲಿ ಓರೋ ಡೆಂಟಲ್ ಕೇರ್‌ನ ಕಾರ್ಯ ಶ್ಲಾಘನೀಯ ಎಂದು ಶಾಸಕ ಮಧು ಜಿ.ಮಾದೇಗೌಡ ಅಭಿಪ್ರಾಯಪಟ್ಟರು.
ನಗರದ ಎಸ್.ಬಿ.ಎಂ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಡೆಂಟಲ್ ಇಂಫ್ಲಾಂಟ್ ಘಟಕ ಹಾಗೂ ದಂತ ಚಿಕಿತ್ಸಾ ಶಿಬಿರಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಜನರು ದಂತದ ಬಗ್ಗೆ ನಿರ್ಲಕ್ಷ್ಯ ಹಾಗೂ ಉದಾಸಿನ ಮನೋಭಾವ ಹೊಂದಿರುವ ಪರಿಣಾಮ ಹಲವರು ದಂತ ಕಳೆದುಕೊಳ್ಳುತ್ತಿರುವುದು ಬೇಸರದ ಸಂಗತಿ. ಆದ್ದರಿಂದ ಇದರ ಬಗ್ಗೆ ಜನರಿಗೆ ಅರಿವು ಮೂಡಿಸಬೇಕೆಂಬ ಉದ್ದೇಶದಿಂದ ಸಂಸ್ಥೆಯು ಗ್ರಾಮಗಳ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಅದರ ಮಹತ್ವವನ್ನು ತಿಳಿಸುವ ಮೂಲಕ ಸಮಾಜಮುಖಿ ಸೇವಾ ಕಾರ್ಯಕ್ಕೆ ಮುಂದಾಗಿದೆ ಎಂದರು.
ಸಂಸ್ಥೆಯ ಸಿಇಒ ಪ್ರೊ.ಡಾ.ಡಿ.ಪಿ.ವಿನುತ್ ಮಾತನಾಡಿ, ಪ್ರತಿಯೊಬ್ಬರಿಗೂ ಗುಣಮಟ್ಟದ ದಂತ ಚಿಕಿತ್ಸೆ ಒದಗಿಸಬೇಕೆಂಬ ನಿಟ್ಟಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಘಟಕ ಪ್ರಾರಂಭಿಸಿದ್ದು ಗ್ರಾಮೀಣ ಜನರಿಗೆ ರಿಯಾಯಿತಿ ದರದಲ್ಲಿ ಸೌಲಭ್ಯವನ್ನು ಒದಗಿಸುವ ಜತೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸೌಲಭ್ಯ ನೀಡಲು ಯೋಜನೆ ರೂಪಿಸಲಾಗಿದೆ ಎಂದರು.
ನಿವೃತ್ತ ಪ್ರಾಂಶುಪಾಲ ಪುಟ್ಟಲಿಂಗಯ್ಯ, ದಂತ ವೈದ್ಯೆ ಪ್ರೊ.ಎ.ಪೂನಮ್ ಇತರರಿದ್ದರು.