ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್.ಎಸ್.ಮಾದಯ್ಯ, ಬೈಟ ಕುಮಾರ್, ಡಾ.ಅಕ್ರಂ, ಚೇತನ್ ಚಿಣ್ಣಪ್ಪ ಇತರರು ಇದ್ದರು. 
ರಾಜ್ಯ

Advice to follow Vivekananda's ideals

ಪೊನ್ನಂಪೇಟೆ: ದೇಶದ ಭವಿಷ್ಯವಾಗಿರುವ ಯುವ ಜನತೆಯು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸುವ ಮೂಲಕ ದೇಶವನ್ನು ಸದೃಢವಾಗಿ ಮುನ್ನಡೆಸಲು ಪಣ ತೊಡಬೇಕು ಎಂದು ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್. ಎಸ್. ಮಾದಯ್ಯ ಸಲಹೆ ನೀಡಿದರು.

ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವಕರ ಪಾಲಿನ ಸ್ಫೂರ್ತಿಯ ಚಿಲುಮೆ ಸ್ವಾಮಿ ವಿವೇಕಾನಂದರ ಚಿಂತನೆಗಳು ಸಾರ್ವಕಾಲಿಕವಾಗಿದ್ದು, ಇವುಗಳನ್ನು ಪಾಲನೆ ಮಾಡಬೇಕು ಎಂದರು.

ಇಂದಿನ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನದ ಗುಂಗಿನಲ್ಲಿ ನಮ್ಮ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಇಡೀ ವಿಶ್ವಕ್ಕೆ ಮಾದರಿಯಾದ ನಮ್ಮ ದೇಶದ ಸಂಸ್ಕೃತಿಯನ್ನು ಯಾರು ಕೂಡ ಮರೆಯಬಾರದು. ದೇಶಕ್ಕಾಗಿ ಶ್ರಮಿಸಿದಂತಹ ಮಹನೀಯರ ಜೀವನ ಚರಿತ್ರೆ ಓದುವ ಮೂಲಕ ವಿದ್ಯಾರ್ಥಿಗಳು ಶಿಸ್ತು, ಸಂಯಮ ಬೆಳೆಸಿಕೊಂಡು ಕಠಿಣ ಪರಿಶ್ರಮದಿಂದ ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.

ಹಿರಿಯ ಉಪನ್ಯಾಸಕ ಕ್ಯಾ.ಬೈಟ ಕುಮಾರ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕ ಡಾ.ಲೆಫ್ಟಿನೆಂಟ್ ಎಂ. ಆರ್. ಆಕ್ರಂ, ಎನ್‌ಎಸ್‌ಎಸ್ ಅಧಿಕಾರಿ ಚೇತನ್ ಚಿಣ್ಣಪ್ಪ ಇತರರು ಇದ್ದರು.