ರಾಜ್ಯ

ಅಗ್ನಿಪಥ ನೇಮಕಾತಿ: ಏಪ್ರಿಲ್ 10 ರವರೆಗೆ ಆನ್‍ಲೈನ್ ನೋಂದಣಿ ಅವಧಿ ವಿಸ್ತರಣೆ

ಕಲಬುರಗಿ : ಆರ್ಮಿ ರಿಕ್ರೂಟಿಂಗ್ ಆಫೀಸ್ ಬೆಳಗಾವಿ ಹಾಗೂ ಬೆಂಗಳೂರು ಹೆಡ್‍ಕ್ವಾಟರ್ಸ್ ರಿಕ್ರೂಟಿಂಗ್ ಜೋನ್ ಬೆಂಗಳೂರು ಇವರ ಸಹಯೋಗದಲ್ಲಿ “ಅಗ್ನಿಪಥ” ನೇಮಕಾತಿಗಾಗಿ ಆನ್‍ಲೈನ್ ಮೂಲಕ ನೋಂದಣಿ ಪ್ರಕ್ರಿಯೆಯ ಅವಧಿಯನ್ನು 2026ರ ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿದೆ ಎಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯ ಡೈರೆಕ್ಟರ್ ರಿಕ್ರೂಟಿಂಗ್ ಕರ್ನಲ್ ಎ.ಕೆ. ಉಪಾಧ್ಯಾಯ ತಿಳಿಸಿದ್ದಾರೆ.
ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಪುರುಷ ಅಭ್ಯರ್ಥಿಗಳು ಭಾರತೀಯ ಸೇನೆಯ www.joinindianarmy.nic.in ವೆಬ್‍ಸೈಟ್‍ನಲ್ಲಿ 2026ರ ಏಪ್ರಿಲ್ 10 ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು.
ಸೇನೆಯಲ್ಲಿ ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‍ಮೆನ್ ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಗ್ನಿವೀರ್ ಟ್ರೇಡ್ಸ್‍ಮೆನ್ ಹುದ್ದೆಗೆ 8ನೇ ತರಗತಿ ಪಾಸ್ ಆಗಿರಬೇಕು. ಅಗ್ನಿವೀರ್ ಕ್ಲರ್ಕ್/ ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗಳ ವಿಭಾಗಗಳಿಗೆ ನೇಮಕಾತಿ ನಡೆಯಲಿದೆ.
ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇತರ ಮಾನದಂಡಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ 2026ರ ಫೆಬ್ರವರಿ 13ರಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಆಫೀಸ್‍ದಿಂದ ಹೊರಡಿಸಿದ ಅಧಿಸೂಚನೆಯನ್ನು ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.