ಕೃತಕ ಬುದ್ಧಿಮತ್ತೆ ಬಳಕೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ  
ರಾಜ್ಯ

ಜಾಗತಿಕ ಸವಾಲುಗಳ ಅಂತರ ಕಡಿತಕ್ಕೆ ಎಐ ಅವಕಾಶ: ಸಚಿವ ಪ್ರಿಯಾಂಕ್ ಖರ್ಗೆ

ಪ್ರಮುಖ ಮುಖ್ಯಾಂಶಗಳು

  • ಕೃತಕ ಬುದ್ಧಿಮತ್ತೆ ಯಾವುದೇ ರಕ್ಷಕನಲ್ಲ. ಅದಕ್ಕೆ ಆತ್ಮಸಾಕ್ಷಿ, ಧೈರ್ಯ ಅಥವಾ ಕರುಣೆ ಇಲ್ಲ. ಆದರೆ, ಈ ಗುಣಗಳನ್ನು ಹೊಂದಿರುವ ಮನುಷ್ಯನ ಕೈಯಲ್ಲಿ ಅದು ಅತ್ಯಂತ ಶಕ್ತಿಯುತ ಸಾಧನ
  • ಸರ್ಕಾರಗಳಿಗೆ ನಾಗರಿಕ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನೀಡಲು ಹಾಗೂ ಯುವ ನವೋದ್ಯಮಿಗಳಿಗೆ ಸಮಾಜಮುಖಿ ಪರಿಹಾರಗಳನ್ನು ರೂಪಿಸಲು ಎಐ ನೆರವಾಗಬೇಕು
  • ಬೆಂಗಳೂರು ವಿಶ್ವದ ನಾಲ್ಕನೇ ಅತಿದೊಡ್ಡ ತಂತ್ರಜ್ಞಾನ ಕೇಂದ್ರ ಹಾಗೂ ಎಐ ಕೌಶಲ ಹೊಂದಿದ ಮಾನವ ಸಂಪನ್ಮೂಲದಲ್ಲಿ ಜಾಗತಿಕವಾಗಿ ಮೂರನೇ ಸ್ಥಾನದಲ್ಲಿರುವುದು ರಾಜ್ಯದ ತಾಂತ್ರಿಕ ನಾಯಕತ್ವವನ್ನು ಪ್ರತಿಬಿಂಬಿಸುತ್ತದೆ
ಬೆಂಗಳೂರು:

ಸಂಯುಕ್ತ ರಾಷ್ಟ್ರಗಳ ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಹೋಲಿಸಿದರೆ ಭಾರತದಲ್ಲಿ ಬಡತನ ನಿರ್ಮೂಲನೆ, ಉತ್ತಮ ಆರೋಗ್ಯ ಸೇವೆ, ಗುಣಮಟ್ಟದ ಶಿಕ್ಷಣ, ಅಸಮಾನತೆ ನಿವಾರಣೆ ಹಾಗೂ ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳ ಅಂತರವನ್ನು ಕಡಿಮೆ ಮಾಡಲು ಕೃತಕ ಬುದ್ಧಿಮತ್ತೆ ಅಪೂರ್ವ ಅವಕಾಶವನ್ನು ಒದಗಿಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ಬುಧವಾರ ಬೆಂಗಳೂರು ನಗರ ವಿಶ್ವವಿದ್ಯಾಲಯ ಹಾಗೂ ವೋಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದ ನಾವೀನ್ಯತೆ ಮತ್ತು ಸಂಶೋಧನಾ ಕೇಂದ್ರ (ಡಬ್ಲೂೃಬಿಸಿ ಆರ್ ಆೃಂಡ್ ಐ) ಆಯೋಜಿಸಿರುವ ಎರಡು ದಿನಗಳ ‘ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೃತಕ ಬುದ್ಧಿಮತ್ತೆ ಬಳಕೆ’ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮತ್ತೆ ಯಾವುದೇ ರಕ್ಷಕನಲ್ಲ. ಅದಕ್ಕೆ ಆತ್ಮಸಾಕ್ಷಿ, ಧೈರ್ಯ ಅಥವಾ ಕರುಣೆ ಇಲ್ಲ. ಆದರೆ, ಈ ಗುಣಗಳನ್ನು ಹೊಂದಿರುವ ಮನುಷ್ಯನ ಕೈಯಲ್ಲಿ ಅದು ಅತ್ಯಂತ ಶಕ್ತಿಯುತ ಸಾಧನವಾಗುತ್ತದೆ. ಸಮಾಜದಲ್ಲಿನ ಸಮಸ್ಯೆಗಳ ಪರಿಹಾರಕ್ಕಾಗಿ ಎಷ್ಟು ಜವಾಬ್ದಾರಿಯಿಂದ ಬಳಸುತ್ತೇವೆ ಎಂಬುದು ಮುಖ್ಯ ಎಂದು ಹೇಳಿದರು.

ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಯತ್ತ ಸಾಗುವ ಸಂದರ್ಭದಲ್ಲಿ ತಂತ್ರಜ್ಞಾನ ಸದಾ ಮಾನವ ಕೇಂದ್ರಿತವಾಗಿರಬೇಕು. ವೈದ್ಯರಿಗೆ ಜೀವ ಉಳಿಸಲು, ರೈತರಿಗೆ ಉತ್ಪಾದಕತೆ ಹೆಚ್ಚಿಸಲು, ಸರ್ಕಾರಗಳಿಗೆ ನಾಗರಿಕ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನೀಡಲು ಹಾಗೂ ಯುವ ನವೋದ್ಯಮಿಗಳಿಗೆ ಸಮಾಜಮುಖಿ ಪರಿಹಾರಗಳನ್ನು ರೂಪಿಸಲು ಎಐ ನೆರವಾಗಬೇಕು ಎಂದು ಕರೆ ನೀಡಿದರು.

ಎಐ ಕೌಶಲದಲ್ಲಿ ಬೆಂಗಳೂರಿಗೆ 3ನೇ ಸ್ಥಾನ:

ರಾಜ್ಯ ಸರ್ಕಾರ ಡೀಪ್-ಟೆಕ್, ಸ್ಟಾರ್ಟ್‌ಅಪ್ ಬೆಂಬಲ, ಕೌಶಲಾಭಿವೃದ್ಧಿ ಹಾಗೂ ಜಾಗತಿಕ ಸಹಭಾಗಿತ್ವಗಳ ಮೂಲಕ ಎಐ ಪರಿಸರ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುತ್ತಿದ್ದು, ಬೆಂಗಳೂರು ವಿಶ್ವದ ನಾಲ್ಕನೇ ಅತಿದೊಡ್ಡ ತಂತ್ರಜ್ಞಾನ ಕೇಂದ್ರ ಹಾಗೂ ಎಐ ಕೌಶಲ ಹೊಂದಿದ ಮಾನವ ಸಂಪನ್ಮೂಲದಲ್ಲಿ ಜಾಗತಿಕವಾಗಿ ಮೂರನೇ ಸ್ಥಾನದಲ್ಲಿರುವುದು ರಾಜ್ಯದ ತಾಂತ್ರಿಕ ನಾಯಕತ್ವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು.
ಇದೇ ವೇಳೆ ಸಮ್ಮೇಳನದ ಸ್ಮರಣ ಸಂಚಿಕೆ ಮತ್ತು ಸಂಶೋಧನಾ ಜರ್ನಲ್ ’ಜಾರಿಸ್’ನ್ನು ಬಿಡುಗಡೆ ಮಾಡಲಾಯಿತು. ಸೋನಾ ಸ್ಟಾರ್ ಎಂಬ ಸಂಸ್ಥೆಯೊಂದಿಗೆ ಎಂಒಯು ಸಹಿ ಮಾಡಲಾಯಿತು. ಸಮ್ಮೇಳನದಲ್ಲಿ ಒಟ್ಟು 355 ಸಂಶೋಧನಾ ಪ್ರಬಂಧಗಳ ಮಂಡನೆ ಮಾಡಲಾಗುತ್ತದೆ.
ಸಮ್ಮೇಳನದಲ್ಲಿ ರಾಯಲ್ ವೋಲ್ವರ್‌ಹ್ಯಾಂಪ್ಟನ್ ಆಸ್ಪತ್ರೆ ನಿರ್ದೇಶಕ ಪ್ರೊ. ಟೋನಿ ವಿನ್ನೀತ್, ಆರ್‌ಜಿಯುಎಚ್‌ಎಸ್ ಕುಲಪತಿ ಡಾ. ಬಿ.ಸಿ. ಭಗವಾನ್, ಡಬ್ಲೂೃಬಿಸಿ ಆರ್ ಆೃಂಡ್ ಐ ನಿರ್ದೇಶಕರಾದ ಪ್ರೊ. ರಿತಿಕಾ ಸಿನ್ಹಾ, ಪ್ರೊ. ಸುರೇಶ್ ರೇಣುಕಪ್ಪ ಉಪಸ್ಥಿತರಿದ್ದರು.
"
"

ವಿದ್ಯಾರ್ಥಿಗಳು ಮತ್ತು ಬೋಧನಾ ಸಿಬ್ಬಂದಿಗೆ ಕೌಶಲಾಧಾರಿತ ತರಬೇತಿ ನೀಡುವ ಮೂಲಕ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ಈ ಕಾರ್ಯಕ್ರಮ ಅನುಕೂಲವಾಗಲಿದೆ. ಇಲ್ಲಿನ ಎಂಒಯುಗಳು ವಿಶ್ವವಿದ್ಯಾಲಯದ ದೃಷ್ಟಿಯಿಂದ ಮಹತ್ವದ್ದಾಗಿದೆ. ಕೃತಕ ಬುದ್ಧಿಮತ್ತೆಯ ಪರಿವರ್ತನಾತ್ಮಕ ಪಾತ್ರವನ್ನು ಅನ್ವೇಷಿಸುವುದು ಸಮ್ಮೇಳನದ ಮುಖ್ಯ ಉದ್ದೇಶವಾಗಿದೆ.

— - ಪ್ರೊ. ರಮೇಶ್ ಬಿ., ಬೆಂ.ನಗರ ವಿವಿ ಕುಲಪತಿ