- ರಾಮೇಶ್ವರಂ ಕೆಫೆಯಲ್ಲಿ ದೋಸೆ ತಿಂದ ಅಖಿಲೇಶ್ ಯಾದವ್!
ಬೆಂಗಳೂರು: ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಕನ್ನೌಜ್ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾದ ಅಖಿಲೇಶ್ ಯಾದವ್ (Akhilesh Yadav) ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಬೆಂಗಳೂರಿನ ಪ್ರಸಿದ್ದ ಕೆಫೆಯೊಂದರಲ್ಲಿ ಆಹಾರವನ್ನು ಸವಿದಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಬೆಂಗಳೂರಿನ ಜನಪ್ರಿಯ ರೆಸ್ಟೋರೆಂಟ್ ರಾಮೇಶ್ವರಂ ಕೆಫೆ (Rameshwaram Cafe) ಗೆ ಭೇಟಿ ನೀಡಿ ಖಾದ್ಯ ಸವಿಸಿದ್ದಾರೆ. ದೋಸೆಗೆ ಅಖಿಲೇಶ್ ಯಾದವ್ ಮಾರು ಹೋಗಿದ್ದಾರೆ.
ಕರ್ನಾಟಕದ ನೆನಪು, ಹಳೆಯ ಬಂಧ.. ಧನ್ಯವಾದಗಳು ಬೆಂಗಳೂರು ಎಂದು ಬರೆದುಕೊಂಡು..ರಾಮೇಶ್ವರಂ ಕೆಫೆ ಒಳಗೆ ಕುಳಿತುಕೊಂಡು ದೋಸೆ ಸವಿಯುತ್ತಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಅಖಿಲೇಶ್ ಯಾದವ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಷ್ಟೇ ಅಲ್ಲ ರಾಮೇಶ್ವರಂ ಕೆಫೆ ತಿಂಡಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಂಬಂಧಿಯೊಬ್ಬರ ಮನೆಗೆ ಬಂದಿದ್ದ ವೇಳೆ ಅಖಿಲೇಶ್ ಯಾದವ್ ರಾಮೇಶ್ವರಂ ಕೆಫೆಗೆ ಭೇಟಿ ನೀಡಿದ್ದಾರೆ.
ಅಖಿಲೇಶ್ ಯಾದವ್ ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವ ಜಿ ಪರಮೇಶ್ವರ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ವಿವಿಧ ವಿಚಾರಗಳ ಕುರಿತು ಚರ್ಚಿಸಿದ್ದಾರೆ. ಈ ಕುರಿತಾದ ಫೊಟೋವನ್ನು ಜಿ ಪರಮೇಶ್ವರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.