ಯಾದಗಿರಿಯ ಆರ್.ವಿ.ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳಿಗೆ ಅಧ್ಯಕ್ಷೆ ಕಮಲಾ ದೇವರಕಲ್ ಸನ್ಮಾನಿಸಿದರು. ಚನ್ನಮಲ್ಲಿಕಾರ್ಜುನ ಅಕ್ಕಿ, ಪಾರ್ವತಿ ನೀಲಂಗಿ, ಶರಣು ಗೊಬ್ಬುರ,ಎಸ್.ಎಸ್.ಮಠ ಇತರರಿದ್ದರು. 
ರಾಜ್ಯ

ಶಿಕ್ಷಣದಿಂದಲೇ ಸರ್ವಾಂಗಿಣ ಅಭಿವೃದ್ಧಿ

ಚನ್ನಬಸಯ್ಯ ಗುರುವಿನ

ಪ್ರಮುಖ ಮುಖ್ಯಾಂಶಗಳು

  • ಆರ್‌ವಿ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಕಮಲಾ ದೇವರಕಲ್ ಅಭಿಮತ
  • ಪ್ರತಿಭಾವಂತ ಮಕ್ಕಳಿಗೆ ಸನ್ಮಾನ
ಯಾದಗಿರಿ
ಶಿಕ್ಷಣದಿಂದಲೇ ಎಲ್ಲವೂ ಸಾಧ್ಯ, ಹೀಗಾಗಿ ಪ್ರತಿಯೊಬ್ಬರು ಉನ್ನತ ಶಿಕ್ಷಣ ಪಡೆದು ಜೀವನದಲ್ಲಿ ಯಶಸ್ಸಿಯಾಗಬೇಕು
ಆರ್.ವಿ.ವಿದ್ಯಾ ಸಂಸ್ಥೆ ಅಧ್ಯಕ್ಷೆ ಕಮಲಾ ಎನ್. ದೇವರಕಲ್ ಹೇಳಿದರು.
ನಗರದ ಚಿತ್ತಾಪುರ ರಸ್ತೆಯಲ್ಲಿರುವ ಆರ್.ವಿ.ಶಿಕ್ಷಣ ಸಂಸ್ಥೆಯ ಪಿಯು ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ 80 ನೇ ಸ್ವಾತಂತ್ಯೋತ್ಸವ ದಿನಾಚರಣೆ ಮತ್ತು ಎಸ್ ಎಸ್ ಎಲ್ಲಾ ಹಾಗೂ ಪಿಯುಸಿ ಮತ್ತು ಪದವಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿಂದುಳಿದ ಈ ಜಿಲ್ಲೆಯ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂಬ ಕನಸು ಹೊತ್ತು ಶಿಕ್ಷಣ ಸಂಸ್ಥೆ ಆರಂಭಿಸಲಾಗಿದೆ. ಇಲ್ಲಿನ ಶಿಕ್ಷಕ ವೃಂದದ ಶ್ರಮದಿಂದಾಗಿ ಉತ್ತಮ ಫಲಿತಾಂಶ ಬರುತ್ತಿದೆ, ನೀಟ್ ಪರೀಕ್ಷೆಯಲ್ಲಿ ಟಾಪ್ ಬರುವ ನಮ್ಮ ವಿದ್ಯಾರ್ಥಿಗಳಿಗೆ ತಲಾ 25 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದು ಘೋಷಿಸಿದರು.
ಬಡತನ ಇನ್ನಿತರ ಸಮಸ್ಯೆಗಳು ಮುಂದೆ ಮಾಡಿ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಬೇಡಿ. ಪ್ರತಿ ಮಕ್ಕಳಲ್ಲೂ ಪ್ರತಿಭೆ ಇರುತ್ತದೆ, ಅದನ್ನು ಹೊರ ತರುವ ಕೆಲಸ ಶಿಕ್ಷಕರಿಂದ ಆಗುತ್ತದೆ ಎಂದು ಕಮಲಾ ದೇವರಕಲ್ ನುಡಿದರು.
ಮುಖ್ಯ ಅತಿಥಿಗಳಾಗಿ ಕೈಗಾರಿಕಾ ವಾಣಿಜ್ಯ ಸಂಸ್ಥೆ ಕಾರ್ಯದರ್ಶಿ ಚನ್ನಮಲ್ಲಿಕಾರ್ಜುನ ಚಕ್ಕಿ, ಪತ್ರಕರ್ತರಾದ ಶರಣು ಗೊಬ್ಬುರ, ಎಸ್.ಎಸ್.ಮಠ ಮಾತನಾಡಿದರು. ಸಂಸ್ಥೆ ಜಂಟಿ ಕಾರ್ಯದರ್ಶಿ ಪಾರ್ವತಿ ಎಸ್.ನೀಲಂಗಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ 13 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಶಿಕ್ಷಕ ವಾಸುದೇವ, ಗೀತಾ ಹಿರೇಮಠ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಪುಷ್ಪಾ, ಸೃಜನಾ ಪ್ರಾರ್ಥಿಸಿದರು. ಪ್ರಭಾರಿ ಮುಖ್ಯಗುರು ಸಂತೋಷ ಪಾಟೀಲï ವಂದಿಸಿದರು.