ರಾಜ್ಯ

ಫಾರ್ಮ್ 7 ದುರ್ಬಳಕೆ ಆರೋಪ: ತನಿಖೆಗೆ ಸೂಚನೆ ನೀಡಿದ ಚುನಾವಣಾ ಆಯೋಗ: ಕಾಂಗ್ರೆಸ್ ಧರಣಿ ಅಂತ್ಯ | Election Commission

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ 'ಫಾರ್ಮ್ 7' ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೋರಾಟಕ್ಕೆ ಮಣಿದಿರುವ ಚುನಾವಣಾ ಆಯೋಗ, ತನಿಖೆಗೆ ಸೂಚನೆ ನೀಡಿದೆ. ಮತ್ತು ಕಾಂಗ್ರೆಸ್ ಧರಣಿಯನ್ನು ಕೊನೆಗೊಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ 'ಫಾರ್ಮ್ 7' ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೋರಾಟಕ್ಕೆ ಮಣಿದಿರುವ ಚುನಾವಣಾ ಆಯೋಗ, ತನಿಖೆಗೆ ಸೂಚನೆ ನೀಡಿದೆ. ಮತ್ತು ಕಾಂಗ್ರೆಸ್ ಧರಣಿಯನ್ನು ಕೊನೆಗೊಳಿಸಿದೆ.

ಮತದಾರರ ಪಟ್ಟಿಯಿಂದ ನಿರ್ದಿಷ್ಟ ಸಮುದಾಯಗಳ ಹೆಸರುಗಳನ್ನು ವ್ಯವಸ್ಥಿತವಾಗಿ ಕಡಿತಗೊಳಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿ ಕಾಂಗ್ರೆಸ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಅನ್ಬು ಕುಮಾರ್ ಅವರಿಗೆ ಅಧಿಕೃತವಾಗಿ ದೂರು ನೀಡಿತ್ತು.

ಆರ್​ಎಸ್ಎಸ್, ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಸಾಮೂಹಿಕವಾಗಿ ಫಾರ್ಮ್ 7 ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಎಸ್​ಐಆರ್​ ಪ್ರಕ್ರಿಯೆಯ ಹೆಸರಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿದೆ. ಸಂಬಂಧಪಟ್ಟವರ ವಿರುದ್ಧ ತಕ್ಷಣವೇ ಎಫ್​ಐಆರ್ ದಾಖಲಿಸಬೇಕು ಮತ್ತು ಬಂಧಿಸಬೇಕೆಂದು ಒತ್ತಾಯಿಸಿ ಆಯೋಗದ ಕಚೇರಿಯಲ್ಲಿ ಧರಣಿ ನಡೆಸಿದ್ದರು.

ಚುನಾವಣಾ ಆಯುಕ್ತ ಅನ್ಭುಕುಮಾರ್ ಅವರು ಈ ಕುರಿತು ಪರಿಶೀಲಿಸುವುದಾಗಿ ಹೇಳಿದ ಎರಡು ದಿನ ಕಾಲಾವಕಾಶ ಕೇಳಿದ್ದರು. ಆದರೆ ಇದಕ್ಕೆ ಒಪ್ಪದ ಸಿಎಂ ಡಿ.ಕೆ.ಶಿವಕುಮಾರ್ ಅವರು, ಕ್ರಮಕೈಗೊಳ್ಳುವವರೆಗೂ ಕಚೇರಿಯಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದು ಧರಣಿ ಆರಂಭಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಮತ್ತು ಕ್ಯಾಬಿನೆಟ್ ಸಚಿವರು ಸಾಥ್ ನೀಡಿದ್ದರು.