ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಪಟ್ಟು Ambedkar statue 
ರಾಜ್ಯ

ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಪಟ್ಟು Ambedkar statue

ಕ್ಯಾಲನೂರು: ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಆಡಳಿತ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿ ರಾಮಪುರ ದಲಿತ ಸಂಟನೆಯ ಮುಖಂಡರು ಮತ್ತು ಯುವಕರು ಸೋಮವಾರ ಅಮ್ಮನಲ್ಲೂರು ಗ್ರಾಪಂ ಕಚೇರಿ ಮುಂಭಾಗ ಸೋಮವಾರ ಧರಣಿ ನಡೆಸಿದರು.Ambedkar statue
ಕೋಲಾರ ತಾಲೂಕು ವೇಮಗಲ್ ಹೋಬಳಿ ಅಮ್ಮನಲ್ಲೂರು ಗ್ರಾಪಂ ವ್ಯಾಪ್ತಿಯ ರಾಮಪುರ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ವಾಣ ವಾಡಲು ರಾಮಪುರ ಗ್ರಾಮಸ್ಥರು ಸುವಾರು ಎರಡು ತಿಂಗಳ ಹಿಂದೆ ಗ್ರಾಮ ಪಂಚಾಯಿತಿಗೆ ಅನುಮತಿ ಕೋರಿ ಸೂಕ್ತ ಸ್ಥಳ ಗುರುತಿಸಿಕೊಡಲು ಮನವಿ ಸಲ್ಲಿಸಿದ್ದರು.
ಗ್ರಾಮಸ್ಥರ ಮನವಿ ಮೇರೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಆಡಳಿತ ಅಧಿಕಾರಿ ರಾಮಪುರ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಶೀಘ್ರ ಅನುಮತಿ ಪತ್ರ ನೀಡಲಾಗುವುದು ಎಂದು ಭರವಸೆ ನೀಡಿದರು. ಆದರೆ ಎರಡು ತಿಂಗಳಾದರೂ ಸಹ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಆಡಳಿತ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಆಡಳಿತ ಅಧಿಕಾರಿ ಸುಬ್ರಹ್ಮಣಿ ಒಂದು ವಾರದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ವಾಣಕ್ಕೆ ಅನುಮತಿ ನೀಡುತ್ತೇವೆ ಎಂದು ಭರವಸೆ ನೀಡಿದ ನಂತರ ಧರಣಿ ಕೈ ಬಿಡಲಾಯಿತು.