ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪಪ್ರಾಚಾರ್ಯ ಸಿದ್ರಾಮ ಗೊಗ್ಗಾ ಇತರರಿದ್ದರು.
- ಬಸವರಾಜ ಮೊಳಕೀರೆ ಅಭಿಮತ
- ಚನ್ನಬಸವೇಶ್ವರ ಗುರುಕುಲದಲ್ಲಿ ಜಯಂತಿ
ಭಾಲ್ಕಿ: ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಸಮಾನತೆ, ಸ್ವಾತಂತ್ರ, ಭ್ರಾತೃತ್ವ ಮತ್ತು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿರುವ ಶ್ರೇಷ್ಠ ಮಾನವತಾವಾದಿ ಚಿಂತನೆಗಳಾಗಿವೆ ಎಂದು ಪ್ರಾಚಾರ್ಯ ಬಸವರಾಜ ಮೊಳಕೀರೆ ಹೇಳಿದರು.
ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೆಯ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಂವಿಧಾನ ಶಿಲ್ಪಿಯಾಗಿ ಅಂಬೇಡ್ಕರ್ ಶೋಷಿತರ ಧ್ವನಿಯಾಗಿ, ಶಿಕ್ಷಣ ಮತ್ತು ಮಹಿಳಾ ಸಬಲೀಕರಣದ ಪ್ರತಿಪಾದಕರಾಗಿ ಅವರು ನೀಡಿದ ಕೊಡುಗೆಗಳು ಭಾರತೀಯ ಸಮಾಜವನ್ನು ಸುಧಾರಿಸುವಲ್ಲಿ ದಾರಿದೀಪವಾಗಿವೆ. ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ವಿಚಾರಧಾರೆ ಮೈಗೂಡಿಸಿಕೊಂಡು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿ ಕೊಳ್ಳಬೇಕು ಎಂದು ತಿಳಿಸಿದರು.
ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ, ಸಿಬಿಎಸ್ ಇ ಪ್ರಿನ್ಸಿಪಲ್ ಎನ್.ರಾಜು, ಲಚಮಾ ರೆಡ್ಡಿ, ಹಣಮಂತ ಜ್ಯಾಂತಿಕರ್, ಶಶಿಧರ ಕುಲಕರ್ಣಿ, ಬಲಭೀಮ ಸುತಾರ್ ಇತರರಿದ್ದರು.