Satish Kulkarni and Prof Malati  
ರಾಜ್ಯ

"ಅಂಬಿಕಾತನಯದತ್ತ' ರಾಷ್ಟ್ರೀಯ ಪ್ರಶಸ್ತಿ ಪ್ರದಾನ 31ರಂದು

ಧಾರವಾಡ: ನಗರದ ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್​ ವತಿಯಿಂದ ವರಕವಿ ಡಾ. ದ.ರಾ. ಬೇಂದ್ರೆಯವರ ಜನ್ಮದಿನವಾದ ಜ. 31ರಂದು "ಅಂಬಿಕಾತನಯದತ್ತ' ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಟ್ರಸ್ಟ್​ ಅಧ್ಯಕ್ಷ ಡಾ. ಸರಜೂ ಕಾಟ್ಕರ್​ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 5 ಗಂಟೆಗೆ ಸಂಜೆ 5 ಗಂಟೆಗೆ ಇಲ್ಲಿನ ಸಾಧನಕೇರಿಯ ಡಾ. ದ.ರಾ. ಬೇಂದ್ರೆ ಭವನದಲ್ಲಿ ಧಾರವಾಡದ ಹಿರಿಯ ಸಾಹಿತಿ ಪ್ರೊ. ಮಾಲತಿ ಪಟ್ಟಣಶೆಟ್ಟಿ ಹಾಗೂ ಹಾವೇರಿಯ ಹಿರಿಯ ಕವಿ ಸತೀಶ ಕುಲಕರ್ಣಿ ಅವರಿಗೆ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ತಲಾ 50,000 ರೂಪಾಯಿ ನಗದು ಫಲಕ ಒಳಗೊಂಡಿದೆ. ಬೆಂಗಳೂರಿನ ಹಿರಿಯ ಸಾಹಿತಿ ಪ್ರೊ. ಎಸ್​.ಜಿ. ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡುವರು ಎಂದರು.
ಅತಿಥಿಗಳಾಗಿ ಹಿರಿಯ ಚಿಂತಕ ಪ್ರೊ. ಐ.ಜಿ. ಸನದಿ, ಕನ್ನಡ ಮತ್ತು ಸಂಸತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ.ಎಚ್​. ಚನ್ನೂರ ಪಾಲ್ಗೊಳ್ಳುವರು. ವಿದುಷಿ ಭಾರ್ಗವಿ ಕುಲಕಣಿರ್ ಹಾಗೂ ಗಾಯತ್ರಿ ಟೊಣಪಿ ಮತ್ತು ತಂಡ ಬೇಂದ್ರೆ ಗೀತಗಾಯನ ಪ್ರಸ್ತುತಪಡಿಸಲಿದೆ ಎಂದರು.