ಅರಕಲಗೂಡಿನಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಪಿ. ಶ್ರೀಧರ್‌ಗೌಡ ಅವರ ಜನ್ಮದಿನದ ಅಂಗವಾಗಿ ಗುರುವಾರ ಅಭಿಮಾನಿ ಬಳಗದ ವತಿಯಿಂದ ಸಾರ್ವಜನಿಕರ ಸೇವೆಗಾಗಿ ಆಂಬ್ಯುಲೆನ್ಸ್ ವಾಹನ ಸೇವೆಯನ್ನು ಕೊಡುಗೆಯಾಗಿ ನೀಡಲಾಯಿತು. ಸೋಮಶೇಖರ್, ಜಾನ್ ವಿ. ನಟರಾಜ್, ಗುರುಮೂರ್ತಿ, ಮಾದೇಶ್, ರಾಜೇಗೌಡ ಇತರರಿದ್ದರು.
ಅರಕಲಗೂಡು: ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಪಿ. ಶ್ರೀಧರ್‌ಗೌಡ ಅವರ ಜನ್ಮದಿನದ ಅಂಗವಾಗಿ ಅಭಿಮಾನಿ ಬಳಗದ ವತಿಯಿಂದ ಸಾರ್ವಜನಿಕರ ಸೇವೆಗಾಗಿ ಆಂಬ್ಯುಲೆನ್ಸ್ ವಾಹನ ಸೇವೆಯನ್ನು ಕೊಡುಗೆಯಾಗಿ ನೀಡಲಾಯಿತು.
ಪಟ್ಟಣದ ಗ್ರಾಮದೇವತೆ ದೊಡ್ಡಮ್ಮ ದೇವಸ್ಥಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಎಚ್.ಪಿ. ಶ್ರೀಧರ್‌ಗೌಡರ ಜನ್ಮದಿನದ ಸಂಭ್ರಮದಲ್ಲಿ ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಟಿ. ಸೋಮಶೇಖರ್ ಮಾತನಾಡಿ, ಈ ಸೇವೆಯಿಂದ ತುರ್ತು ಸಂದರ್ಭಗಳಲ್ಲಿ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಸಮಾಜಮುಖಿ ಕಾರ್ಯಗಳಿಗೆ ಶ್ರೀಧರ್‌ಗೌಡ ಅವರು ಸದಾ ಪ್ರೋತ್ಸಾಹ ನೀಡುತ್ತಿರುವುದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಜನನಾಯಕನಾಗಿದ್ದು, ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು ಬಡವರು, ರೈತರು, ಮಹಿಳೆಯರು ಹಾಗೂ ಯುವಕರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅವರ ಸೇವಾ ಮನೋಭಾವ ಎಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದರು.
ಅಭಿಮಾನಿಗಳು ಹಾಗೂ ಬೆಂಬಲಿಗರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ವಿ. ಗುರುಮೂರ್ತಿ, ಪಪಂ ಮಾಜಿ ಅಧ್ಯಕ್ಷ ಹೂವಣ್ಣ, ಮಾಜಿ ಉಪಾಧ್ಯಕ್ಷ ಸುಬಾನ ಷರೀಫ್, ಹಳ್ಳಿಮೈಸೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಗೌಡ, ಚರ್ಚ್ ಧರ್ಮಗುರು ಜಾನ್ ವಿ. ನಟರಾಜ್, ಮುಖಂಡರಾದ ಲಕ್ಷ್ಮಣ್, ರಾಜೇಶ್, ಪ್ರಶಾಂತ್, ಮಾದೇಶ್, ಯೋಗೇಶ್, ಧರ್ಮ, ಬಸವರಾಜು, ಪುಟ್ಟಸ್ವಾಮಿ, ಶ್ರೀನಿವಾಸ್, ದಶರಥ ಇತರರಿದ್ದರು.