ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನೆಪದಲ್ಲಿ ಕೆಲವು ಅಪ್ರಾಪ್ತ ಬಾಲಕರನ್ನು ಬಂಧಿಸಿ, ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್(PSI Praveen arrested) ಅವರನ್ನು ಬಂಧಿಸಲಾಗಿದೆ.
ಹಿರಿಯ ಅಧಿಕಾರಿಯೊಬ್ಬರು ನೀಡಿದ ಮಾಹಿತಿ ಪ್ರಕಾರ, ಕೆಲವು ತಿಂಗಳ ಹಿಂದೆ ಅಮೃತಹಳ್ಳಿಯಲ್ಲಿ ವರದಿಯಾದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ಕೆಲವು ಅಪ್ರಾಪ್ತ ಬಾಲಕರನ್ನು ಬಂಧಿಸಿದ್ದರು. ಬಳಿಕ ಅವರನ್ನು ಖಾಸಗಿ ಸ್ಥಳಕ್ಕೆ ಕರೆದೊಯ್ದು, ತನ್ನ ಬೆಲ್ಟ್‌ನಿಂದ ಹೊಡೆದು, ಅಶ್ಲೀಲ ಲೈಂಗಿಕ ಕೃತ್ಯಗಳಲ್ಲಿ ಒತ್ತಾಯಿಸಿ ಕಿರುಕುಳ ನೀಡಿದ್ದು, ಅದನ್ನು ತನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿಕೊಂಡಿದ್ದರು ಎನ್ನಲಾಗಿದೆ.
ಆ ವಿಡಿಯೋ ಇತ್ತೀಚೆಗೆ ಸೋರಿಕೆಯಾಗಿ ಮೇಲಿನ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಲುಪಿದೆ ಎನ್ನಲಾಗಿದೆ. ಬಳಿಕ ಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಅಪ್ರಾಪ್ತ ಬಾಲಕರನ್ನು ಅಶ್ಲೀಲ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಒತ್ತಾಯಿಸಿದ್ದಲ್ಲದೆ, ಅದರ ವೀಡಿಯೊಗಳನ್ನು ತನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ ಆರೋಪದ ಮೇಲೆ ಪಿಎಸ್ಐ ಪ್ರವೀಣ್ ವಿರುದ್ಧ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ ಕಾಯ್ದೆ -2012 ರ ಅಡಿಯಲ್ಲಿ ಸ್ವಯಂಪ್ರೇರಿತವಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.
ಈ ಹಿನ್ನೆಲೆ ಎಫ್‌ಐಆರ್ ಆಧರಿಸಿ, ಕೊತ್ತನೂರು ಪೊಲೀಸರು ಸೋಮವಾರ(ಜೂ. 29) ಸಂಜೆ ಪ್ರವೀಣ್‌ನನ್ನು ಬಂಧಿಸಿ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ (ಏಜೆನ್ಸೀಸ್).