ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಹೊಸೂರು ಗ್ರಾಮದಲ್ಲಿ ಪತ್ತೆಯಾದ ಅನ್ನಭಾಗ್ಯ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದು.
- ಅಕ್ರಮವಾಗಿ ಸಂಗ್ರಹಿಸಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ
- ಪಟ್ಟಣ ಪೊಲೀಸರು ಕಾರ್ಯಾಚರಣೆ
ಗುಂಡ್ಲುಪೇಟೆ: ಅಕ್ರಮವಾಗಿ ಸಂಗ್ರಹಿಸಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ತಾಲೂಕಿನ ಕಂದೇಗಾಲ ಹೊಸೂರು ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ಅನ್ನಭಾಗ್ಯ ಯೋಜನೆಯ ಅಕ್ಕಿ ಸಂಗ್ರಹಣೆ ಮಾಡಿರುವ ಖಚಿತ ಮಾಹಿತಿ ಮೇರೆಗೆ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
41 ಚೀಲಗಳಲ್ಲಿ ತುಂಬಿಸಿದ್ದ ಸುಮಾರು 30 ಸಾವಿರ ರೂ. ಮೌಲ್ಯದ ಅಕ್ಕಿಯನ್ನು ವಶಕ್ಕೆ ಪಡೆದು ಆರೋಪಿಗಳ ಪತ್ತೆಗೆ ಕ್ರಮಕೈಗೊಂಡಿದ್ದಾರೆ.