ಕಲಬುರಗಿ: ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಲಬುರಗಿ ಪೀಠದಲ್ಲಿ ಶಿರಸ್ತೇದಾರರಾಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾರಾವ ಹಾಬಾಳಕರ್ ಅವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಘಟಕದ ಜಂಟಿ ಕಾರ್ಯದರ್ಶಿಯಾಗಿ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರು ನೇಮಿಸಿ ನಾಮನಿರ್ದೇಶನಗೊಳಿಸಿದ್ದಾರೆ.
ಅಣ್ಣಾರಾವ ಹಾಬಾಳಕರ್ ನಾಮ ನಿರ್ದೇನಕ್ಕೆ ಜಿಲ್ಲಾ ಸರಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಂಡಗಿ ಸೇರಿದಂತೆ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.