ಗುಂಡ್ಲುಪೇಟೆ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ರಸ್ತೆ ನಿರ್ಮಾಣಕ್ಕೆ ಗಣೇಶ್ ಪ್ರಸಾದ್ ಭೂಮಿಪೂಜೆ ನೆರವೇರಿಸಿದರು. ಆರ್.ಎಸ್.ನಾಗರಾಜು, ಮಾಡ್ರಹಳ್ಳಿ ಮಹದೇವಪ್ಪ, ಸೋಮಹಳ್ಳಿ ಶಿವನಾಗಪ್ಪ, ವಿರೂಪಾಕ್ಷ, ಶ್ರೀಧರ್, ಎಚ್.ಎಸ್.ನಂಜುಂಡಪ್ರಸಾದ್, ಮೃತ್ಯುಂಜಯಪ್ಪ, ಎಚ್.ಎನ್.ಬಸವರಾಜು, ನಾರಾಯಣನಾಯ್ಕ, ಮನು, ಪರಮೇಶ್ವರಪ್ಪ, ಚಂದ್ರು ಇದ್ದರು. 
ರಾಜ್ಯ

1.5 ಕೋಟಿ ವೆಚ್ಚದಲ್ಲಿ ಎಪಿಎಂಸಿ ರಸ್ತೆ ಅಭಿವೃದ್ಧಿ

ಪ್ರಮುಖ ಮುಖ್ಯಾಂಶಗಳು

  • ಮುಖ್ಯಮಂತ್ರಿಗಳ ವಿಶೇಷ ಅನುದಾನ
  • ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿ
ಗುಂಡ್ಲುಪೇಟೆ: ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅಗತ್ಯ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ತಾಲೂಕಿನ ತೆರಕಣಾಂಬಿ ಗ್ರಾಮದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ನಾನು ಶಾಸಕನಾದ ನಂತರ ಸರ್ಕಾರದಿಂದ 21 ಕೋಟಿ ರೂ. ಅನುದಾನ ತಂದು ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ. ಈಗಾಗಲೇ ಬೇಗೂರು ಗ್ರಾಮದಲ್ಲಿ ಸುಸಜ್ಜಿತ ಹತ್ತಿ ಮಾರುಕಟ್ಟೆ ನಿರ್ಮಿಸಲಾಗಿದೆ. ಪ್ರತಿದಿನವೂ ಕೋಟ್ಯಂತರ ರೂ.ವಹಿವಾಟು ನಡೆಸುವ ಪಟ್ಟಣದ ಎಪಿಎಂಸಿಯಲ್ಲಿ ರಸ್ತೆಗಳು ಹಾಳಾಗಿದ್ದ ಹಿನ್ನೆಲೆಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ರಸ್ತೆ ಹಾಗೂ ಚರಂಡಿಯನ್ನು ನಿರ್ಮಾಣ ಕಾಮಗಾರಿಗೆ ಸದ್ಯ ಭೂಮಿಪೂಜೆ ಮಾಡಲಾಗಿದೆ ಎಂದು ಹೇಳಿದರು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಆರ್.ಎಸ್.ನಾಗರಾಜು, ನಿರ್ದೇಶಕರಾದ ಪಿ.ಮಹದೇವಪ್ಪ, ಮಾಡ್ರಹಳ್ಳಿ ಮಹದೇವಪ್ಪ, ಸೋಮಹಳ್ಳಿ ಶಿವನಾಗಪ್ಪ, ವಿರೂಪಾಕ್ಷ, ಕಾರ್ಯದರ್ಶಿ ಶ್ರೀಧರ್, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಮುಖಂಡರಾದ ಮೃತ್ಯುಂಜಯಪ್ಪ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ನಾರಾಯಣನಾಯ್ಕ, ಮನು, ಪರಮೇಶ್ವರಪ್ಪ, ಚಂದ್ರು ಸೇರಿದಂತೆ ಹಲವರು ಇದ್ದರು.