ಕಲಬುರಗಿಯ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಏ.21ರಂದು ಜಗದ್ಗುರು ಆದಿ ಶಂಕರಾಚಾರ್ಯರ ಜಯಂತಿ ಅರ್ಥಪೂರ್ಣವಾಗಿ ಆಚರಿಸುವಂತೆ ಸನಾತನ ಯುವಶಕ್ತಿ ಚಾರಿಟೇಬಲ್ ಟ್ರಸ್ಟ್ನಿಂದ ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿಯವರಿಗೆ ಬುಧವಾರ ಮನವಿಪತ್ರ ಸಲ್ಲಿಸಲಾಯಿತು. ಪಿ.ವಿ.ಜೋಶಿ, ಗುರುರಾಜ ಕುಲಕರ್ಣಿ, ಪ್ರಸನ್ನ ದೇಶಪಾಂಡೆ, ಶ್ರೀಪಾದ ಜೋಶಿ ಇತರರಿದ್ದರು.