ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ಮನವಿ.
ಧಾರವಾಡ: ಹುಬ್ಬಳ್ಳಿ- ಧಾರವಾಡ ಅವಳಿನಗರ ನಡುವಿನ ಬಿಆರ್ಟಿಎಸ್ ಅವ್ಯವಸ್ಥೆಯನ್ನು ಸರಿಪಡಿಸುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ಧಾರವಾಡ ಧ್ವನಿ ಅಧ್ಯಕ್ಷ ಈಶ್ವರ ಶಿವಳ್ಳಿ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಗುರುವಾರ ಮನವಿ ಸಲ್ಲಿಸಲಾಯಿತು.
ಬಿಆರ್ಟಿಎಸ್ ಚಿಗರಿ ಬಸ್ಗಳ ಸಂಚಾರಕ್ಕೆ ಪ್ರತ್ಯೇಕ ಕಾರಿಡಾರ್ ಇದೆ. ಅದೇರೀತಿ ಸಾರ್ವಜನಿಕರ ವಾಹನ ಸಂಚಾರಕ್ಕೆ ಪಕ್ಕದಲ್ಲಿ ರಸ್ತೆ ವ್ಯವಸ್ಥೆ ಇದೆ. ಆದರೆ, ಈಗ ಸಾರ್ವಜನಿಕರು ಸಂಚರಿಸುವ ಮಾರ್ಗದಲ್ಲಿ ವಾಹನಗಳ ದಟ್ಟಣೆ ಅಧಿಕವಾಗಿದೆ. ಸಾರ್ವಜನಿಕರು ತ್ವರಿತವಾಗಿ ಹುಬ್ಬಳ್ಳಿ- ಧಾರವಾಡ ಮಧ್ಯೆ ಸಂಚರಿಸಲು ಕಷ್ಟವಾಗುತ್ತಿದೆ. ಆದ್ದರಿಂದ ಧಾರವಾಡದ ಜ್ಯುಬಿಲಿ ವೃತ್ತದಿಂದ ನವಲೂರ ಸೇತುವೆವರೆಗೆ ಹಾಗೂ ಹುಬ್ಬಳ್ಳಿ ಉಣಕಲ್ದಿಂದ ಹೊಸೂರು ವೃತ್ತದವರೆಗೆ ಬಿಆರ್ಟಿಎಸ್ ಕಾರಿಡಾರ್ನಲ್ಲಿ ಎಲ್ಲ ಸಾರ್ವಜನಿಕ ವಾಹನಗಳಿಗೆ ಸಂಚರಿಸಲು ಅನುವು ಮಾಡಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.