ಕಾನಹೊಸಹಳ್ಳಿ ಸಮೀಪದ ಹಿರೇಕುಂಬಳಗುಂಟೆ ಗ್ರಾಮದಲ್ಲಿ ಮನೆ ಮನೆಗೆ ಶಾಸಕರು, ಮನೆ ಬಾಗಿಲಿಗೆ ಸರ್ಕಾರ ಕಾರ್ಯಕ್ರಮವನ್ನು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಉದ್ಘಾಟಿಸಿದರು. ತಹಸೀಲ್ದಾರ್ ವಿ.ಕೆ.ನೇತ್ರಾವತಿ, ತಾಪಂ ಇಒ ನರಸಪ್ಪ, ಬಿ.ಇ.ಮೈಲೇಶ್ ಬೇವೂರ್, ಜಿಪಂ ಎಇಇ ಮಲ್ಲಿಕಾರ್ಜುನ ಸ್ವಾಮಿ, ಪಿಡಬ್ಲುಡಿ ಎಇಇ ನಾಗನಗೌಡ ಇದ್ದರು.
- ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿಕೆ
- ಮನೆ ಮನೆಗೆ ಶಾಸಕರು, ಮನೆ ಬಾಗಿಲಿಗೆ ಸರ್ಕಾರ ಕಾರ್ಯಕ್ರಮ
ಕಾನಹೊಸಹಳ್ಳಿ: ಕ್ಷೇತ್ರದ ಜನರ ಸಮಸ್ಯೆಗಳಿಗೆ ದ್ವನಿಯಾಗುವುದಕ್ಕಾಗಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಮನೆ ಮನೆಗೆ ಶಾಸಕರು, ಮನೆ ಬಾಗಿಲಿಗೆ ಸರ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು.
ಹಿರೇಕುಂಬಳಗುಂಟೆ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದರು. ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳ ಜತೆಗೆ ಅಭಿವೃದ್ಧಿಯಲ್ಲಿ ಹಿಂದುಳಿದಿರುವುದನ್ನು ಮನಗಂಡಿದ್ದೇನೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಎರಡು ಸಾವಿರ ಕೋಟಿ ರೂ.ಗೂ ಅಧಿಕ ಅನುದಾನ ತಂದು ಅಭಿವೃದ್ಧಿಗೆ ಮುಂದಾಗಿರುವುದಾಗಿ ಹೇಳಿದರು.
ವಿವಿಧೆಡೆ ಒಟ್ಟು 19 ಕೋಟಿ ರೂ. ವೆಚ್ಚದ ಚೆಕ್ ಡ್ಯಾಂ, ಜಿನುಗು ಕೆರೆ, ರಸ್ತೆ ಕಾಮಗಾರಿಗಾಗಿ ಭೂಮಿ ಪೂಜೆ ನೆರವೇರಿಸಲಾಗಿದೆ. ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲೂ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಕ್ಷೇತ್ರಕ್ಕೆ ಈ ವರ್ಷ ಹೆಚ್ಚಿನ ಮನೆಗಳನ್ನು ನೀಡುವಂತೆ ಕೋರಲಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ 400 ಹೊಸ ಬಸ್‌ಗಳು ಬರಲಿದ್ದು, ಅದರಲ್ಲಿ 20ಕ್ಕೂ ಹೆಚ್ಚು ಬಸ್‌ಗಳನ್ನು ಕ್ಷೇತ್ರಕ್ಕೆ ತರಲಾಗುವುದು ಎಂದು ತಿಳಿಸಿದರು.
ತಾಪಂಗೆ ಸಂಬಂಧಿಸಿದ 30, ಕಂದಾಯ ಇಲಾಖೆಯ 8, ಸಾಲ ಸೌಲಭ್ಯ ಕುರಿತ 10, ಜೆಸ್ಕಾಂಗೆ ಸಂಬಂಧಿಸಿದ 7 ಅರ್ಜಿಗಳು ಸಲ್ಲಿಕೆಯಾದವು.
ತಹಸೀಲ್ದಾರ್ ವಿ.ಕೆ.ನೇತ್ರಾವತಿ, ತಾಪಂ ಇಒ ನರಸಪ್ಪ, ಬಿಇಒ ಮೈಲೇಶ್ ಬೇವೂರು, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ್, ತಾಲೂಕು ಮಟ್ಟದ ಅಧಿಕಾರಿಗಳಾದ ಮಲ್ಲಿಕಾರ್ಜುನ, ಮಹಮ್ಮದ್ ಬಾಷಾ, ಕೆ.ನಾಗನಗೌಡ, ಶ್ಯಾಮಪ್ಪ, ಜಿಪಂ ಮಾಜಿ ಸದಸ್ಯ ಕೆ.ಎಂ.ಶಶಿಧರ, ಮುಖಂಡರಾದ ಉಮೇಶ್, ತಳವಾರ ಶರಣಪ್ಪ, ಮಲಿಯಪ್ಪ, ಹುಲಿಕೆರೆ ದುರುಗೇಶ್, ರಮೇಶ್ ಗೌಡ, ತೂಲಹಳ್ಳಿ ಬಸವರಾಜ, ಪಿಡಿಒ ನಿಂಗಪ್ಪ ಇತರರಿದ್ದರು.