ಗೋಕಾಕ ತಾಲೂಕಿನ ಎನ್ಎಸ್ಎ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು. ನೀರಾವರಿ ನಿಗಮದ ಅಧಿಕಾರಿಗಳು ಇದ್ದರು.
ಗೋಕಾಕ: ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ಲ ಜಲಾಶಯದಿಂದ ಮೂರು ಕಾಲುವೆಗಳಿಗೆ ನೀರು ಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಇಲ್ಲಿನ ಎನ್ಎಸ್ಎ್ ಕಾರ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಬೇಸಿಗೆಯ ಹಾಹಾಕಾರ ತಪ್ಪಿಸಲು ಟಪ್ರಭಾ ಎಡದಂಡೆ, ಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರು ಹರಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು. ನೀರಾವರಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.
ಗೋಕಾಕ ತಾಲೂಕಿನ ಎನ್ಎಸ್ಎ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು. ನೀರಾವರಿ ನಿಗಮದ ಅಧಿಕಾರಿಗಳು ಇದ್ದರು.