Application for the Pratibha Award from the Vokkaligara Sanm
ತಿಪಟೂರು: ನಗರದ ಹೌಸಿಂಗ್ ಬೋರ್ಡ್ನಲ್ಲಿರುವ ಒಕ್ಕಲಿಗರ ಭವನದಲ್ಲಿ ತಾಲೂಕು ಒಕ್ಕಲಿಗರ ಸಂಘದಿಂದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಸಾನ್ನಿಧ್ಯದಲ್ಲಿ ತಾಲೂಕಿನ ಒಕ್ಕಲಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎನ್. ಚಿದಾನಂದ್ ತಿಳಿಸಿದರು.
ಸಂದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಮಾಂತರ ವಿದ್ಯಾರ್ಥಿಗಳಿಗೆ ಶೇ.75 ಮತ್ತು ತಿಪಟೂರು ನಗರ ವಿದ್ಯಾರ್ಥಿಗಳಿಗೆ ಶೇ.85 ಹಾಗೂ ತಿಪಟೂರೇತರ ಶಾಲಾ& ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿದ ತಾಲೂಕಿನ ವಿದ್ಯಾರ್ಥಿಗಳಿಗೆ ಶೇ.85ಮತ್ತು ಎಲ್ಲ ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು ಜೂ.15ರೊಳಗೆ ನಗರದ ಹೌಸಿಂಗ್ ಬೋರ್ಡ್ನಲ್ಲಿರುವ ಒಕ್ಕಲಿಗ ಸಂಘದ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಬಹುದಾಗಿದೆ ಎಂದರು.