ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಆಹ್ವಾನಿಸಿದೆ
- 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹ
- ಅರ್ಜಿ ಸಲ್ಲಿಕೆಯು ಜ.10ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಜ.25 ಕೊನೆಯ ದಿನವಾಗಿದೆ.
- ಮಾ.1ರಂದು ಕೆಇಎ ವತಿಯಿಂದ ಪರೀಕ್ಷೆ ನಡೆಸಲಾಗುತ್ತದೆ.
ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಮತ್ತು ಪರಿಶಿಷ್ಟ ವರ್ಗಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಕೆಯು ಜ.10ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಜ.25 ಕೊನೆಯ ದಿನವಾಗಿದೆ. ಮಾ.1ರಂದು ಕೆಇಎ ವತಿಯಿಂದ ಪರೀಕ್ಷೆ ನಡೆಸಲಾಗುತ್ತದೆ. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಹಾಗೂ ಪಾಲಕರ ಅನುಕೂಲಕ್ಕಾಗಿ ಕೆಇಎ ವೆಬ್‌ಸೈಟ್‌ನಲ್ಲಿ ೋಷಣಾ ಪತ್ರವನ್ನು ಪ್ರಕಟಿಸಲಾಗಿದೆ.
ೋಷಣಾ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದು. ಅರ್ಜಿ ಸಲ್ಲಿಸುವ ವಿಧಾನವನ್ನು ಮಾಹಿತಿ ಪುಸ್ತಕ-2026 ವನ್ನು ವೆಬ್‌ಸೈಟ್‌ನಲ್ಲಿ ಪಡೆಯಬಹುದು.
ಅರ್ಜಿ ಸಲ್ಲಿಸಲು ಶಾಲೆಯಿಂದ ಸ್ಯಾಟ್ಸ್ ಸಂಖ್ಯೆ ಹಾಗೂ ಸಂಬಂಧಿಸಿದ ದಾಖಲಾತಿಗಳೊಂದಿಗೆ ಸಲ್ಲಿಸಬಹುದು.