ಸರ್ಕಾರಿ ಶಾಲಾ ಕೊಠಡಿಗಳನ್ನು 360 ಕೋಟಿ ರೂ. ವೆಚ್ಚ
- 2025-26ನೇ ಆರ್ಥಿಕ ಸಾಲಿನೊಳಗೆ ಯೋಜನೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ (ಯೋಜನೆ) ಆದೇಶ
- ಜಿಲ್ಲಾ ಮಟ್ಟದಲ್ಲಿ ಜಿಪಂ ಸಿಇಒ ಮತ್ತು ಡಿಡಿಪಿಐಗಳು ಮೇಲ್ವಿಚಾರಣೆ ನೀಡಲು ತಿಳಿಸಲಾಗಿದೆ.
- ರಾಜ್ಯಾದ್ಯಂತ 2,200 ಸರ್ಕಾರಿ ಶಾಲಾ ಕೊಠಡಿಗಳನ್ನು 360 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
ಬೆಂಗಳೂರು: ರಾಜ್ಯಾದ್ಯಂತ 2,200 ಸರ್ಕಾರಿ ಶಾಲಾ ಕೊಠಡಿಗಳನ್ನು 360 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಅನುಮೋದನೆ ನೀಡಿ ಶಾಲಾ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ.
2025-26ನೇ ಆರ್ಥಿಕ ವರ್ಷದಲ್ಲಿ ಬೆಳಗಾವಿ ಮತ್ತು ಕಲಬುರಗಿ ವಿಭಾಗದಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾರ್ಯವನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ. ವಲಯ ಮಟ್ಟದಲ್ಲಿ ಟೆಂಡರ್ ಕರೆಯಲು ಅವಕಾಶ ನೀಡುವಂತೆ ಸೂಚಿಸಲಾಗಿದೆ.
ಮೈಸೂರು ಮತ್ತು ಬೆಂಗಳೂರು ವಿಭಾಗಗಳಲ್ಲಿ ಶಾಲಾ ತರಗತಿ ಕೊಠಡಿಗಳ ನಿರ್ಮಾಣ ಕಾರ್ಯವನ್ನು ಲೋಕೋಪಯೋಗಿ ಇಲಾಖೆಗೆ ಟೆಂಡರ್ ನೀಡಲು ತಿಳಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಪಂ ಸಿಇಒ ಮತ್ತು ಡಿಡಿಪಿಐಗಳು ಮೇಲ್ವಿಚಾರಣೆ ನೀಡಲು ತಿಳಿಸಲಾಗಿದೆ.
2025-26ನೇ ಆರ್ಥಿಕ ಸಾಲಿನೊಳಗೆ ಯೋಜನೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ (ಯೋಜನೆ) ಆದೇಶ ಹೊರಡಿಸಿದ್ದಾರೆ.