Arrest of four absconding accused
ಬಂಗಾರಪೇಟೆ: ನಗರದ ಹೊರವಲಯದ ಆರ್.ಆರ್.ಕಲ್ಯಾಣ ಮಂಟಪ ಪಕ್ಕದ ಪೆಟ್ರೋಲ್ ಬಂಕ್ ಸಮೀಪ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಲ್ಲಿ ಪ್ರಮುಖ ಆರೋಪಿ ರೌಡಿ ಶೀಟರ್ ಅಬಿ ನಗರ ನಿವಾಸಿಯಾಗಿದ್ದು ಇವನ ವಿರುದ್ಧ ಕೊಲೆ, ಕೊಲೆ ಯತ್ನ ಸೇರಿ ಗಂಭೀರ ಪ್ರಕರಣದಾಖಲಾಗಿವೆ. ಉಳಿದ ಆರೋಪಿಗಳಾದ ಶರಣ್, ಲಿತಿಕ್, ಶಶಿಧರ್ ಕೆಜಿಎಫ್ ನಗರದ ನಿವಾಸಿಗಳಾಗಿದ್ದು, 18 ರಿಂದ 19 ವರ್ಷದೊಳಗಿನವರಾಗಿದ್ದಾರೆ.
ಇತ್ತೀಚೆಗೆ ನಗರದ ಇಂದಿರಾನಗರ ನಿವಾಸಿ ಗೋಕುಲ್ (25) ಬೈಕ್ಗೆ ಪೆಟ್ರೋಲ್ ಹಾಕಿಸಿಕೊಳ್ಳಲು ತೆರಳಿದ್ದ ವೇಳೆ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಗೋಕುಲ್ ನೀಡಿದ ದೂರಿನ ಮೇರೆಗೆ ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.
ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಹಾಗೂ ಡಿವೈಎಸ್ಪಿ ಲಕ್ಷ$್ಮಯ್ಯ ಮಾರ್ಗದರ್ಶನದಲ್ಲಿ ಬಂಗಾರಪೇಟೆ ಸರ್ಕಲ್ ಇನ್ಸ್ಪೆಕ್ಟರ್ ರವಿಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.