Arrest of marijuana seller
ಮುಳಬಾಗಿಲು: ತಾಲೂಕಿನ ಅಳ್ಳಾಲಸಂದ್ರ ಗ್ರಾಮದ ಇಟ್ಟಿಗೆ ಫ್ಯಾಕ್ಟರಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ಆರೋಪಿಯನ್ನು ಬಂಧಿಸಿದ್ದಾರೆ.
ಒರಿಸ್ಸಾ ಮೂಲದ ಶಿಬಶಂಕರ್ ನಾಯಕ್ (34) ಬಂಧಿತ. ಮುಳಬಾಗಿಲು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಕೆ.ಜಿ.ಸತೀಶ್ ಹಾಗೂ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಖಚಿತ ಮಾಹಿತಿ ಬಂದಿತ್ತ. ಇದನು ಆಧರಿಸಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿ, 3.425 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.