Arrest of those consuming marijuana
ಚಿಂತಾಮಣಿ: ತಾಲೂಕಿನ ಮುರಗಮಲ್ಲಾ ಗ್ರಾಮದಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರನ್ನು ಕೆಂಚಾರ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೆರೆಗೆ ಪೊಲೀಸರು ದಾಳಿ ನಡೆಸಿದಾಗ ಗಾಂಜಾ ಸೇವಿಸುತ್ತಿರುವುದು ಕಂಡುಬಂದಿದೆ. ಚಿಂತಾಮಣಿಯ ಶ್ರೀರಾಮ ನಗರದ ನಿವಾಸಿ ಶಹಬಾಜ್ ಪಾಷಾ(26) ಮತ್ತು ಆಶ್ರಯ ಬಡಾವಣೆಯ (23) ಫಯಾಜ್ ಅವರನ್ನು ಬಂಧಿಸಿ, ಗಾಂಜಾ ಮತ್ತು ಸಂಬಂಧಿಸಿದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ನಗರದಲ್ಲಿ ಅಪರಿಚಿತ ವ್ಯಕ್ತಿಯಿಂದ 300 ರೂ. ನೀಡಿ ಗಾಂಜಾ ಪಡೆದು ಸೇವಿಸುತ್ತಿರುವುದಾಗಿ ವಿಚಾರಣೆಯಲ್ಲಿ ಹೇಳಿದ್ದಾರೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.