ದೊಡ್ಡಬಳ್ಳಾಪುರದಲ್ಲಿ ತಾಲೂಕು ಕಸಾಪ ಮತ್ತು ಕನ್ನಡ ಜಾಗೃತ ಪರಿಷತ್​ನಿಂದ ಹಾಸ್ಯ ನಟ ಉಮೇಶ್​ ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯಗೆ ನುಡಿನಮನ ಸಲ್ಲಿಸಲಾಯಿತು. ಕನ್ನಡಪರ ಹಿರಿಯ ಹೋರಾಟಗಾರ ಸಂಜೀವ್​ ನಾಯಕ್​, ಗುರುರಾಜಪ್ಪ, ಕನ್ನಡ ಪಕ್ಷದ ಜಿಲ್ಲಾಧ್ಯಕ್ಷ ಮುನಿಪಾಪಣ್ಣ, ಭಾರತ್​ ಸ್ಕೌಟ್ಸ್​ ಮತ್ತು ಗೈಡ್​ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ ಇದ್ದರು. 
ರಾಜ್ಯ

ಸಮಾಜಕ್ಕೆ ಕಲಾವಿದರೇ ಸ್ಪೂರ್ತಿ / DODDABALLAPUR

ದೊಡ್ಡಬಳ್ಳಾಪುರ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್​ನಿಂದ ಶುಕ್ರವಾರ ಹಾಸ್ಯ ನಟ ಉಮೇಶ್​ ಮತ್ತು ತಾಲೂಕಿನ ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ ಅವರಿಗೆ ಕನ್ನಡ ಜಾಗೃತ ಪರಿಷತ್​ ಸಭಾಂಗಣದಲ್ಲಿ ನುಡಿನಮನ ಸಲ್ಲಿಸಲಾಯಿತು.
ಹಿರಿಯ ಕನ್ನಡಪರ ಹೋರಾಟಗಾರ ಸಂಜೀವ ನಾಯಕ್​ ಮಾತನಾಡಿ, ಕಲಾವಿದರು ಕಲೆ, ಅಭಿನಯದಿಂದ ಜನರ ಮನಸ್ಸನ್ನು ತಲುಪಿ, ಭಾವನೆಗಳನ್ನು ಕೆರಳಿಸಿ, ಸಮಾಜಕ್ಕೆ ಸ್ಪೂರ್ತಿ ತುಂಬಿರುತ್ತಾರೆ. ಪ್ರತಿಭಾವಂತ ಕಲಾವಿದರ ನಿಧನ ಕಲೆ ಮತ್ತು ಸಾಂಸತಿಕ ರಂಗದಲ್ಲಿ ದೊಡ್ಡ ಶೂನ್ಯ ಸೃಷ್ಟಿಸುತ್ತದೆ ಎಂದರು.
ನಟ ಎಂ.ಎಸ್​.ಉಮೇಶ್​ ಅವರು ಬಾಲ್ಯದಿಂದಲೇ ಅಭಿನಯದಲ್ಲಿ ತೊಡಗಿಸಿಕೊಂಡಿದ್ದವರು. ಹಿರಣ್ಣಯ್ಯರ ನಾಟಕ ಕಂಪನಿಯಲ್ಲಿ ಬಾಲನಟನಾಗಿ ನಂತರ ಗುಬ್ಬಿ ವೀರಣ್ಣರ ಕಂಪನಿಯಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿದರು. 1960ರಲ್ಲಿ ಮಕ್ಕಳ ರಾಜ್ಯ' ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ್ದಾರೆ ಎಂದರು.
ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್​.ಹೆಗಡೆ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್​.ರವಿಕಿರಣ್​, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್​, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್​, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್​, ಪ್ರತಿನಿಧಿಗಳಾದ ನಾಗರತ್ನಮ್ಮ, ಕೋದಂಡರಾಮ್​, ಜಿ.ವಿ.ಗಣೇಶ್​, ಪ್ರಾಂಶುಪಾಲ ಎಂ.ಸಿ.ಮಂಜುನಾಥ್​, ದೈಹಿಕ ಶ್ರೀನಿವಾಸ್​ ಇದ್ದರು.
ಕಲಾವಿದರಿಗೆ ಪ್ರೋತ್ಸಾಹ : ಜಾನಪದ ಕಲಾವಿದರಾದ ತಾಲೂಕಿನ ಮಧುರೆ ಹೋಬಳಿ ಶ್ಯಾಕಲದೇವನಪುರದ ರಾಮಚಂದ್ರಯ್ಯ ಹಲವಾರು ಕಲಾವಿದರನ್ನು ಬೆಳೆಸಿ ಪ್ರೋತ್ಸಾಹಿಸಿದರು. ದೊಡ್ಡಬಳ್ಳಾಪುರ ತಾಲೂಕಿನ ಹಲವಾರು ಹಿರಿಯ ಕಲಾವಿದರಿಗೆ ಸರ್ಕಾರದಿಂದ ಮಾಸಾಶನ ದೊರೆಯುವಂತೆ ಮಾಡಿದರು. ದೊಡ್ಡಬಳ್ಳಾಪುರಕ್ಕೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕಲಾವಿದರನ್ನು ಕರೆಸಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಸ್ಥಳಿಯ ಕಲಾವಿದರನ್ನು ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ ಹೇಳಿದರು.