Chanpudas,-Munnadas 
ರಾಜ್ಯ

ಉಸಿರುಗಟ್ಟಿಸಿ ಅಸ್ಸಾಂ ಮೂಲದ ಮಹಿಳೆ ಕೊಲೆ

ಪ್ರಮುಖ ಮುಖ್ಯಾಂಶಗಳು

  • ಪರಾರಿಯಾಗಿದ್ದ ಆರೋಪಿ ಬಂಧನ
ಬೆಂಗಳೂರು: ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಅಸ್ಸಾಂ ಮೂಲದ ಮಹಿಳೆ ಸಾವಿನ ಕುರಿತು ಪರಪ್ಪನ ಅಗ್ರಹಾರ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವುದು ದೃಢಪಟ್ಟಿದೆ.
ಚಂಪುದಾಸ್ (25) ಹತ್ಯೆಯಾದ ಮಹಿಳೆ. ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಮುನ್ನಾದಾಸ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ವಿವಾಹಿತೆಯನ್ನು ಅಸ್ಸಾಂನಿಂದ ಕರೆದುಕೊಂಡು ಬಂದು ನಾಗನಾಥಪುರದಲ್ಲಿ ಬಾಡಿಗೆ ಮನೆ ಪಡೆದಿದ್ದ ವ್ಯಕ್ತಿ ಆಕೆಯೊಂದಿಗೆ ಸಹ ಜೀವನ ನಡೆಸುತ್ತಿದ್ದ. ಇಬ್ಬರಿಗೆ ಮದುವೆಯಾಗಿತ್ತು, ಆರೋಪಿ ಮುನ್ನಾದಾಸ್‌ಗೆ ಇಬ್ಬರು ಮಕ್ಕಳಿದ್ದಾರೆ. ಆದರೂ ಆಕೆಯನ್ನು ಪ್ರೀತಿಸಿ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾನೆ. ಆದರೆ, ಚಂಪುದಾಸ್ ಮೇಲೆ ಸಂಶಯ ವ್ಯಕ್ತಪಡಿಸಿದ್ದ ಮುನ್ನಾದಾಸ್ ಆಕೆಯನ್ನು ಆಗಸ್ಟ್ 30 ರಂದು ಮಧ್ಯಾಹ್ನ ಸಿರೆಯಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ.
ಮಹಿಳೆಯ ಚಿರಾಟ ಕೇಳಿದ ಶಬ್ದ ಕೇಳಿದ ಬಾಡಿಗೆ ಮನೆಯವರು ಸ್ಥಳಕ್ಕೆ ಹೋಗಿದ್ದಾರೆ. ಅಷ್ಟರಲ್ಲಿ ಆರೋಪಿ ಮುನ್ನಾದಾಸ್ ಓಡಿಹೋಗಿದ್ದಾನೆ. ಮನೆಯೊಳಗೆ ಹೋಗಿ ನೋಡಿದಾಗ ಚಂಪುದಾಸ್ ಮೃತಪಟ್ಟಿದ್ದಳು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಪರಿಶೀಲನೆ ನಡೆಸಿ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದರು. ಸ್ಥಳೀಯರ ಮಾಹಿತಿ ಮೆರೆಗೆ ಕೊಲೆ ಶಂಕೆ ವ್ಯಕ್ತಪಡಿಸಿದ್ದ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಮೃತದೇಹ ಆಸ್ಪತ್ರೆಗೆ ದಾಖಲಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದರು.
ಸೆ.15ರಂದು ಬಂದ ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯ ಅಸಹಜ ಸಾವಲ್ಲ, ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ವೈದ್ಯರು ದೃಢಪಡಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿ ರಾಯಸಂದ್ರದ ಮತ್ತೊಂದು ಬಾಡಿಗೆ ಮನೆಯಲ್ಲಿ ಅಡಗಿದ್ದವನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಸಿರೆಯಿಂದ ಉಸಿರುಗಟ್ಟಿಸಿ ಹತ್ಯೆಗೈದು ್ಯಾನ್‌ಗೆ ನೇಣು ಹಾಕಿರುವುದಾಗಿ ಆರೋಪಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ ಎಂದು ಎಲೆಕ್ಟ್ರಾನಿಕ್ ಡಿಸಿಪಿ ಎಂ.ನಾರಾಯಣ ಹೇಳಿದ್ದಾರೆ.