fight 
ರಾಜ್ಯ

ತಲ್ವಾರನಿಂದ ಕೊಲೆಗೆ ಯತ್ನ

ಚಿಕ್ಕೋಡಿ: ಸಂಕೇಶ್ವರದ ದತ್ತಾತ್ರೇಯ ಥೋರವತ(40) ಮೇಲೆ ಅಪರಿಚಿತರ ಗುಂಪು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿಡಸೋಸಿ ರಸ್ತೆಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಸ್ನೇಹಿತನ ಜತೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ಕಾರಿನಲ್ಲಿ ಬಂದ ನಾಲ್ವರ ಗುಂಪು ಬೈಕ್‌ಗೆ ಡಿಕ್ಕಿ ಹೊಡೆದು, ದತ್ತಾತ್ರೇಯ ಥೋರವತ ಮೇಲೆ ತಲ್ವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಗಾಯಗೊಂಡಿರುವ ದತ್ತಾತ್ರೇಯನನ್ನು ಗಡಹಿಂಗ್ಲಜ್ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿದ್ದು, ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.