1.5 ಕೋಟಿ ವೆಚ್ಚದಲ್ಲಿ ಆಡಿಟೋರಿಯಂ ನಿಮಾರ್ಣ Auditorium
ಶ್ರೀನಿವಾಸಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 1.5 ಕೋಟಿ ರೂ. ವೆಚ್ಚದಲ್ಲಿ ಆಡಿಟೋರಿಯಂ ಹಾಲ್ ನಿಮಾರ್ಣ ಮಾಡಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು. Auditorium
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾಲೇಜು ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ಈ ಕಾಲೇಜು ದೀರ್ ಇತಿಹಾಸ ಹೊಂದಿದೆ. ಇಲ್ಲಿ ಓದಿದ ವಿದ್ಯಾರ್ಥಿಗಳು ಇಂದು ಐಎಎಸ್, ಐಪಿಎಸ್ನಂಥ ಉನ್ನತ ಹುದ್ದೆಗಳಲ್ಲಿದ್ದಾರೆ. ನಮ್ಮ ತಾಲೂಕು ಶಿಕ್ಷಣ ರಂಗದಲ್ಲಿ ಅತ್ಯುನ್ನತ ಸ್ಥಾನ ಪಡೆದಿದೆ ಎಂದು ಹೇಳಿದರು.
ಕಾಲೇಜಿಗೆ ಆಡಿಟೋರಿಯಂ ಅವಶ್ಯ ಇದ್ದು, 1.5 ಕೋಟಿ ರೂ. ವೆಚ್ಚದಲ್ಲಿ ಹಾಲ್ ನಿಮಾರ್ಣ ಮಾಡಲಾಗುವುದು. ಈಗಾಗಲೇ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರೊಂದಿಗೆ ಚರ್ಚಿಸಿದ್ದೇನೆ. ಹಣ ಬಿಡುಗಡೆ ಮಾಡುತ್ತೇನೆಂದು ಭರವಸೆ ನೀಡಿದ್ದಾರೆ ಎಂದರು.
ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗಿದೆ, ಸಂಸ್ಕಾರ ಜ್ಞಾನ ಮೈಗೂಡಿಸಿಕೊಂಡು ದೇಶದ ಜವಾಬ್ದಾರಿಯುತ ಪ್ರಜೆಗಳಾಗಬೇಕು ಎಂದರು.
ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಬಹುಮಾನ ವಿತರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಸಣ್ಣೀರಯ್ಯ ಮಾತನಾಡಿ, ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಶಾಸಕರು ಶಕ್ತಿಮೀರಿ ಶ್ರಮಿಸುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಉತ್ತಮ ಫಲಿತಾಂಶ ಪಡೆದಿದೆ. ಈ ಬಾರಿ ಬಿಸಿಎ ಕೋರ್ಸ್ ಪ್ರಾರಂಭಿಸಿದ್ದು, ಈ ಅವಕಾಶ ಎಲ್ಲರೂ ಪಡೆದುಕೊಳ್ಳಬೇಕು ಎಂದು ಹೇಳಿದರು.
ಶುಭವತಿ, ಕಾವ್ಯಾ, ಶ್ಯಾಮಲಾ, ವ್ಯವಸ್ಥಾಪಕ ವಿಜಯ್ ಕುಮಾರ ಇತರರು ಇದ್ದರು.