ಜೇವರ್ಗಿಯಲ್ಲಿ ಹಮ್ಮಿಕೊಂಡಿದ್ದ ಡಾ.ಅಂಬೇಡ್ಕರ್​ ಉತ್ಸವ ಸಮಾರಂಭವನ್ನು ಶ್ರೀ ಡಾ.ಸಿದ್ಧಲಿಂಗ ಸ್ವಾಮೀಜಿ ಉದ್ಘಾಟಿಸಿದರು. ಭಂತೆ ವರಜ್ಯೋತಿ, ರಾಜಶೇಖರ ಸೀರಿ, ಅರ್ಜುನ ಭದ್ರೆ, ಮರೆಪ್ಪ ಹಳ್ಳಿ, ಗುರುಲಿಂಗಪ್ಪಗೌಡ ಮಾಲಿಪಾಟೀಲ್​ ಇತರರಿದ್ದರು. 
ರಾಜ್ಯ

ಬಾಬಾಸಾಹೇಬ್​, ಸಂವಿಧಾನದ ಅರಿವು ಅವಶ್ಯ

ಪ್ರಮುಖ ಮುಖ್ಯಾಂಶಗಳು

  • ನೆಲೋಗಿಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ನುಡಿ
  • ಜೇವರ್ಗಿಯಲ್ಲಿ ಡಾ.ಅಂಬೇಡ್ಕರ್​ ಅರಿವು ಉತ್ಸವ
ಜೇವರ್ಗಿ: ಪುರೋಹಿತಶಾಹಿ ಕಪಿಮುಷ್ಠಿಯಲ್ಲಿ ಸಿಲುಕಿ ಮೂಢನಂಬಿಕೆಗಳಲ್ಲಿ ಮುಳುಗಿರುವ ಜನರಿಗೆ ಅಂಬೇಡ್ಕರ್​ ಮತ್ತು ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕಿದೆ ಎಂದು ನೆಲೋಗಿ ವಿರಕ್ತ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ನುಡಿದರು.
ಅಂಬೇಡ್ಕರ್​ ಭವನದಲ್ಲಿ ತಥಾಗತ ಗೌತಮ ಬುದ್ಧರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಡಾ.ಬಿ.ಆರ್​.ಅಂಬೇಡ್ಕರ್​ ಅವರ 135ನೇ ಜಯಂತ್ಯುತ್ಸವ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ.ಅಂಬೇಡ್ಕರ್​ ಅರಿವು ಉತ್ಸವ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, 800 ವರ್ಷ ಮೊಗಲರು, 200 ವರ್ಷ ಬ್ರಿಟಿಷರು ಆಳಿದ ಈ ದೇಶದಲ್ಲಿ ಜಾತೀಯತೆ, ಅಸ್ಪೃಶ್ಯತೆ, ಮೂಢನಂಬಿಕೆ, ಕಂದಾಚಾರಗಳು ನೆಲೆಯೂರಿದ್ದವು. ಅಂಬೇಡ್ಕರ್​ ಅವರು ಸಂವಿಧಾನದ ಮೂಲಕ ಎಲ್ಲ ಪಿಡುಗುಗಳನ್ನು ಹೊಡೆದೊಡಿಸಲು ಶ್ರಮಿಸಿದ್ದಾರೆ ಎಂದರು.
ಸುರೇಶ ಗೌತಮ ಉಪನ್ಯಾಸ ನೀಡಿ, ಅಂಬೇಡ್ಕರ್​ ಕೇವಲ ದಲಿತರಿಗಾಗಿ ದುಡಿಯಲಿಲ್ಲ. ಮಹಿಳೆ, ಹಿಂದುಳಿದ ವರ್ಗದವರ ಏಳಿಗೆಗೆ ಶ್ರಮಿಸಿದ್ದಾರೆ ಎಂದು ಶ್ಲಾಘಸಿದರು.
ಪತ್ರಕರ್ತ ಡಾ.ಶಿವರಂಜನ ಸತ್ಯಂಪೇಟೆ, ಅಖಿಲ ಭಾರತ ವೀರಶೈವ, ಲಿಂಗಾಯತ ಸಮಾಜದ ರಾಜ್ಯ ಸದಸ್ಯ ರಾಜಶೇಖರ ಸೀರಿ ಮಾತನಾಡಿದರು. ಅಣದೂರಿನ ಬುದ್ಧ ವಿಹಾರದ ಭಂತೆ ವರಜ್ಯೋತಿ ಸಾನ್ನಿಧ್ಯ, ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಪುಂಡಲೀಕ ಗಾಯಕವಾಡ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಉದ್ಘಾಟಿಸಿದರು.
ದಸಂಸ ರಾಜ್ಯ ಸಂಚಾಲಕ ಅರ್ಜುನ ಭದ್ರೆ, ಪ್ರಮುಖರಾದ ಮರೆಪ್ಪ ಹಳ್ಳಿ, ಚಂದ್ರಶೇಖರ ಹರನಾಳ, ಗುರುಲಿಂಗಪ್ಪಗೌಡ ಮಾಲಿಪಾಟೀಲ್​, ಚನ್ನಮಲ್ಲಯ್ಯ ಹಿರೇಮಠ, ಬಾಪೂಗೌಡ ಪಾಟೀಲ್​ ಬಿರಾಳ, ವಸಂತ ನರಿಬೋಳ, ಕೆರೆಪ್ಪ ಹಿಪ್ಪರಗಿ, ಸುಭಾಷ ಚನ್ನೂರ, ಭೀಮರಾಯ ಜನಿವಾರ, ಶಾಂತಪ್ಪ ಯಲಗೋಡ, ಡಾ.ಅನಿಲ್​ ಟೆಂಗಳಿ, ಡಾ.ಅಶೋಕ ದೊಡ್ಡಮನಿ, ನಿಜಲಿಂಗ ದೊಡ್ಡಮನಿ, ವಿಠಲ್​ ಚಿಕಣಿ, ಪಂಡಿತ ಮದಗುಣಕಿ ಇತರರಿದ್ದರು.
ವಿವಿಧ ಕ್ಷೇತ್ರದ ಸಾಧಕರು ಹಾಗೂ ಎಸ್ಸೆಸ್ಸೆಲ್ಸಿ&ದ್ವೀತಿಯ ಪಿಯುಸಿ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.