ಬೆಂಗಳೂರು ವಿಶ್ವವಿದ್ಯಾಲಯ 
ರಾಜ್ಯ

ಬೆಂವಿವಿಗೆ ಐಎಸ್‌ಒ ಪ್ರಮಾಣೀಕರಣ: ಮೊದಲ ಸರ್ಕಾರಿ ವಿವಿ ಎಂಬ ಹೆಗ್ಗಳಿಕೆ

ಪ್ರಮುಖ ಮುಖ್ಯಾಂಶಗಳು

  • ಕಳೆದ ಮೂರು ವರ್ಷಗಳಿಂದ ಅನುಸರಿಸಲಾಗಿರುವ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಗುಣಮಟ್ಟ ನಿರ್ವಹಣಾ ವ್ಯವಸ್ಥೆ, ದಾಖಲಾತಿಗಳು ಮತ್ತು ಕಾರ್ಯವೈಖರಿಯನ್ನು ಸಮಗ್ರವಾಗಿ ಪರಿಶೀಲಿಸಿ ಈ ಅಂತಾರಾಷ್ಟ್ರೀಯ ಗುಣಮಟ್ಟದ ಪ್ರಮಾಣೀಕರಣ
  • ಈ ಸಾಧನೆಯು ವಿಶ್ವವಿದ್ಯಾಲಯದ ಗುಣಮಟ್ಟದ ಶಿಕ್ಷಣ, ಸಂಶೋಧನೆ, ಆಡಳಿತಾತ್ಮಕ ಕಾರ್ಯಕ್ಷಮತೆ ಹಾಗೂ ನಿರಂತರ ಸುಧಾರಣೆಯ ಬದ್ಧತೆಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿದೆ
  • ಈ ಗರಿಮೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿಶ್ವವಿದ್ಯಾಲಯದ ಸ್ಥಾನಮಾನ ಮತ್ತಷ್ಟು ಬಲಗೊಳ್ಳಲಿದೆ.
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ಗುಣಮಟ್ಟದ ಶಿಕ್ಷಣ, ಪಾರದರ್ಶಕ ಆಡಳಿತ ಮತ್ತು ನಿರಂತರ ಸುಧಾರಣೆಯತ್ತ ತನ್ನ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿ, ಐಎಸ್‌ಒ (ಐಎಸ್‌ಒ 9001:2015) ಗುಣಮಟ್ಟ ನಿರ್ವಹಣಾ ವ್ಯವಸ್ಥೆ ( ಕ್ಯೂಎಂಎಸ್) ಪ್ರಮಾಣೀಕರಣವನ್ನು ಪಡೆದುಕೊಂಡಿದೆ. ಈ ಸಾಧನೆಯೊಂದಿಗೆ ಐಎಸ್‌ಒ ಪ್ರಮಾಣೀಕರಣ ಪಡೆದ ಮೊದಲ ಸಾರ್ವಜನಿಕ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕಳೆದ ಮೂರು ವರ್ಷಗಳಿಂದ ಅನುಸರಿಸಲಾಗಿರುವ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಗುಣಮಟ್ಟ ನಿರ್ವಹಣಾ ವ್ಯವಸ್ಥೆ, ದಾಖಲಾತಿಗಳು ಮತ್ತು ಕಾರ್ಯವೈಖರಿಯನ್ನು ಸಮಗ್ರವಾಗಿ ಪರಿಶೀಲಿಸಿ ಈ ಅಂತಾರಾಷ್ಟ್ರೀಯ ಗುಣಮಟ್ಟದ ಪ್ರಮಾಣೀಕರಣವನ್ನು ನೀಡಲಾಗಿದೆ.
ಐಎಸ್‌ಒ ಪ್ರಮಾಣೀಕರಣ ಮುಖ್ಯಸ್ಥೆ ಡಾ. ಲಕ್ಷ್ಮೀ ಶ್ರೀನಿವಾಸ್ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ. ಶಿವರಾಜು ಹಾಗೂ ಕುಲಸಚಿವೆ ಡಾ. ಕೆ.ಟಿ. ಶಾಂತಲಾ ಅವರಿಗೆ ಐಎಸ್‌ಒ ಪ್ರಮಾಣೀಕರಣ ಪತ್ರವನ್ನು ಅಧಿಕೃತವಾಗಿ ಹಸ್ತಾಂತರಿಸಿದರು.
ಐಕ್ಯುಎಸಿ ನಿರ್ದೇಶಕ ಪ್ರೊ.ನಾಗರಾಜ್ ಮಾತನಾಡಿ, ಈ ಸಾಧನೆಯು ವಿಶ್ವವಿದ್ಯಾಲಯದ ಗುಣಮಟ್ಟದ ಶಿಕ್ಷಣ, ಸಂಶೋಧನೆ, ಆಡಳಿತಾತ್ಮಕ ಕಾರ್ಯಕ್ಷಮತೆ ಹಾಗೂ ನಿರಂತರ ಸುಧಾರಣೆಯ ಬದ್ಧತೆಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿದೆ ಎಂದು ತಿಳಿಸಿದರು.
"

ಬೆಂಗಳೂರು ವಿಶ್ವವಿದ್ಯಾಲಯ ಶೈಕ್ಷಣಿಕ ಗುಣಮಟ್ಟ, ಸಂಶೋಧನಾ ಸಾಮರ್ಥ್ಯ ಹಾಗೂ ಸಂಘಟಿತ ಆಡಳಿತದ ಮೂಲಕ ಅಂತಾರಾಷ್ಟ್ರೀಯ ಗುಣಮಟ್ಟದ ಮಾನದಂಡಗಳನ್ನು ತಲುಪಿದೆ. ಈ ಗರಿಮೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿಶ್ವವಿದ್ಯಾಲಯದ ಸ್ಥಾನಮಾನ ಮತ್ತಷ್ಟು ಬಲಗೊಳ್ಳಲಿದೆ.

- ಪ್ರೊ.ಸಿ.ಶಿವರಾಜು, ಬೆಂ.ವಿವಿ ಕುಲಪತಿ