Be aware of the ill effects of drugs.
ಶಿರಾ: ಯುವಜನತೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಹೊಂದಿ ವ್ಯಸನದಿಂದ ದೂರವಿರಬೇಕು ಎಂದು ತಾಲೂಕು ಯೋಜನಾಧಿಕಾರಿ ದೇವರಾಜ್ ತಿಳಿಸಿದರು.
ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಿರಾದ ಮಾಧವ ವಿದ್ಯಾ ಮಂದಿರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜ ನಿಮಾರ್ಣ ಸಾಧ್ಯ ಎಂದು ತಿಳಿಸಿದರು.
ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಚ್.ಎ.ಚಂದ್ರಶೇಖರ್ ಬಾಬು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಪ್ರೌಢಶಾಲೆ ಶಿಕ್ಷಕ ಅನಂತ ಪದ್ಮನಾಭ ಆಚಾರ್ಯ, ಜ್ಞಾನವಿಕಾಸ ಸಮನ್ವಯಾಧಿಕಾರಿ ಮಮತಾ, ಆಡಳಿತ ಸಹಾಯಕ ಪ್ರಬಂಧಕಿ ಪಲ್ಲವಿ, ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಪಾರ್ವತಿ ಹಾಗೂ ಶಾಲೆಯ ಶಿಕ್ಷಕರು ಇದ್ದರು.