ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ
- ಕನ್ನಡ ಭಾಷೆಯ ಬಗ್ಗೆ ಗೌರವ ಮತ್ತು ಘನತೆಯನ್ನು ಕಾಪಾಡುವುದು ಎಲ್ಲ ಶಿಕ್ಷಣ ಸಂಸ್ಥೆಗಳ ಅದ್ಯ ಕರ್ತವ್ಯವಾಗಿದೆ.
- ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯಸ್ಥರು ಕನ್ನಡ ಭಾಷೆಗೆ ದಕ್ಕೆ ಬಾರದಂತೆ ವೈಯಕ್ತಿಕ ಹೊಣೆಗಾರಿಕೆ ವಹಿಸಿ ಕಾಲೇಜುಗಳಲ್ಲಿ ಭಾಷಾ ಗೌರವ ಮತ್ತು ಸೌಹಾರ್ದತೆಯನ್ನು ಕಾಪಾಡಕೊಳ್ಳಬೇಕು.
- ಒಂದು ವೇಳೆ ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ, ಸಂಬಂಧಪಟ್ಟ ಸಿಬ್ಬಂದಿಯ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಲಾಗುವುದು.
ಬೆಂಗಳೂರು: ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಿದ್ದು, ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಕನ್ನಡ ಭಾಷೆಗೆ ಅಗೌರವ ಉಂಟಾಗದಅತೆ ಎಲ್ಲರೂ ಎಚ್ಚರವಹಿಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ಕನ್ನಡವು ಕರ್ನಾಟಕ ರಾಜ್ಯದ ಅಧಿಕೃತ ಭಾಷೆಯಾಗಿದ್ದು, ಇದಕ್ಕೆ ಸಂವಿಧಾನತ್ಮಾಕ ಹಾಗೂ ಕಾನೂನಾತ್ಮಕ ಗೌರವವಿದೆ. ಕನ್ನಡ ಭಾಷೆಯ ಬಗ್ಗೆ ಗೌರವ ಮತ್ತು ಘನತೆಯನ್ನು ಕಾಪಾಡುವುದು ಎಲ್ಲ ಶಿಕ್ಷಣ ಸಂಸ್ಥೆಗಳ ಅದ್ಯ ಕರ್ತವ್ಯವಾಗಿದೆ. ಯಾವುದೇ ಸಂದರ್ಭದಲ್ಲಿಯೂ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅವಮಾನವಾಗುವ ರೀತಿಯಲ್ಲಿ ವರ್ತನೆಗಳು ನಡೆಯವುದನ್ನು ಸಂಪೂರ್ಣವಾಗಿ ಖಂಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕನ್ನಡ ಭಾಷೆಗೆ ಅಗೌರವ ಆಗದಂತೆ ಎಚ್ಚರವಹಿಸಬೇಕೆಂದು ಸೂಚಿಸಿದೆ.
ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯಸ್ಥರು ಕನ್ನಡ ಭಾಷೆಗೆ ದಕ್ಕೆ ಬಾರದಂತೆ ವೈಯಕ್ತಿಕ ಹೊಣೆಗಾರಿಕೆ ವಹಿಸಿ ಕಾಲೇಜುಗಳಲ್ಲಿ ಭಾಷಾ ಗೌರವ ಮತ್ತು ಸೌಹಾರ್ದತೆಯನ್ನು ಕಾಪಾಡಕೊಳ್ಳಬೇಕು. ಒಂದು ವೇಳೆ ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ, ಸಂಬಂಧಪಟ್ಟ ಸಿಬ್ಬಂದಿಯ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಲಾಗುವುದು. ಯಾವುದೇ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳೊಂದಿಗೆ ಹಾಗೂ ಇತರರೊಂದಿಗೆ ಸಂವಹನ ಮಾಡುವ ವೇಳೆ ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹಾಗೂ ಅಸಮಂಜಸ ಪದಗಳನ್ನು ಬಳಸಬಾರದು ಎಂದು ಸೂಚಿಸಿ ಸುತ್ತೋಲೆ ಹೊರಡಿಸಿದೆ.
ವಿಟಿಯು ವ್ಯಾಪ್ತಿಯಲ್ಲಿ 220 ಸಂಯೋಜಿತ ಕಾಲೇಜುಗಳಲ್ಲಿ ವಿವಿಧ ರಾಜ್ಯ, ರಾಷ್ಟಗಳ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕನ್ನಡ ಭಾಷೆಗೆ ದಕ್ಕೆ ಬಾರದಂತೆ ನೋಡಿಕೊಳ್ಳುತ್ತಿದ್ದೇವೆ. ಆದರೂ, ಅಹಿತಕರ ಘಟನೆ ನಡೆಯಬಾರದು ಎಂದು ಸೂಚನೆ ನೀಡಲಾಗಿದೆ.- ಪ್ರೊ. ಎಸ್.ವಿದ್ಯಾಶಂಕರ್, ವಿಟಿಯು ಕುಲಪತಿ