ಬೆಂಗಳೂರಿನಲ್ಲಿ ಈಚೆಗೆ ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ ರಾಜ್ಯ ಮಟ್ಟದ ಪ್ರಥಮ ಸ್ಥಾನ ಪ್ರಶಸ್ತಿಯನ್ನು ಎಚ್.ಡಿ.ಕೋಳೇಕರಗೆ ಪ್ರದಾನ ಮಾಡಿದರು. ಕೆ.ರಾಜೇಂದ್ರ, ವೈ.ಎಸ್.ಪಾಟೀಲ, ಜಿ.ಟಿ.ಪುತ್ರ ಇತರರಿದ್ದರು. 
ರಾಜ್ಯ

ಬೆಳಗಾವಿ ಜಿಲ್ಲೆಗೆ ರಾಜ್ಯ ಮಟ್ಟದ ಪ್ರಥಮ ಸ್ಥಾನ

ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಸರ್ಕಾರದ ವಿವಿಧ ಕೃಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ರೈತರಿಗೆ ಮುಟ್ಟಿಸುವಲ್ಲಿ ಕೃಷಿ ಇಲಾಖೆ ಅತ್ಯುತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಗೆ ರಾಜ್ಯ ಮಟ್ಟದ ಪ್ರಥಮ ಸ್ಥಾನ ಲಭಿಸಿದೆ.
ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದ ಕಾರ್ಯ, ಕೃಷಿ ಹೊಂಡ, ಫಸಲ್ ಬಿಮಾ ಯೋಜನೆ, ಕೃಷಿ ಸಿಂಚಾಯಿ, ತುಂತುರು, ಹನಿ ನೀರಾವರಿ, ರೈತಪರ ಯೋಜನೆಗಳ ಯಶಸ್ವಿ ಜಾರಿ, ತಂತ್ರಜ್ಞಾನ ಆಧಾರಿತ ಕೃಷಿ ಸೇವೆಗಳ ವಿಸ್ತರಣೆ ಹಾಗೂ ರೈತರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಿದ ಕಾರ್ಯವನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಬೆಂಗಳೂರಿನಲ್ಲಿ ಮೇ 18ರಂದು ನಡೆದ ರಾಜ್ಯ ಮಟ್ಟದ ಮುಂಗಾರು ಹಂಗಾಮಿನ ಕಾರ್ಯಾಗಾರದಲ್ಲಿ ಕೃಷಿ ಸಚಿವ ಚಲುವರಾಯ ಸ್ವಾಮಿ ರಾಜ್ಯ ಮಟ್ಟದ ಪ್ರಥಮ ಸ್ಥಾನ ಪ್ರಶಸ್ತಿಯನ್ನು ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್.ಡಿ.ಕೋಳೇಕರಗೆ ಪ್ರದಾನ ಮಾಡಿದರು. ಕೃಷಿ ಇಲಾಖೆ ಕಾರ್ಯದರ್ಶಿ ಕೆ.ರಾಜೇಂದ್ರ, ಕೃಷಿ ಆಯುಕ್ತ ವೈ.ಎಸ್.ಪಾಟೀಲ, ಕೃಷಿ ನಿರ್ದೇಶಕ ಜಿ.ಟಿ.ಪುತ್ರ, ಜಿಲ್ಲಾ ಕೃಷಿ ಉಪನಿರ್ದೇಶಕ ಸಲೀಂ ಸಂಗತ್ರಾನ್, ಚಿಕ್ಕೋಡಿ ಉಪ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ ಇತರರಿದ್ದರು.