CM Siddaramaiah 
ರಾಜ್ಯ

ಬಳ್ಳಾರಿ ಬ್ಯಾನರ್​ ಘಟನೆ; ಪೊಲೀಸ್​ ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯಲಿದೆ: CM ಸಿದ್ದರಾಮಯ್ಯ

ಮೈಸೂರು: ಬಳ್ಳಾರಿ ನಡೆದ ಸಂರ್ಘಷದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿರುವ ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದೇ ಎಂಬ ಪ್ರಶ್ನೆಗೆ ಈ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸುತ್ತೇನೆ. ಪೊಲೀಸ್ ತನಿಖೆಯ ನಂತರ ಘಟನೆಯ ಸತ್ಯಾಸತ್ಯತೆ ತಿಳಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ, ಜಿಎಸ್​ಟಿ ಕಡಿತ, ವಿಬಿ ಜಿ ರಾಮ್ ಜಿ ಯೋಜನೆ ಜಾರಿಯಂತಹ ಕೇಂದ್ರದ ಕ್ರಮಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ, ರಾಜ್ಯಕ್ಕೆ ಜಿಎಸ್ ಟಿ ಯಿಂದ ವಾರ್ಷಿಕವಾಗಿ 12 ರಿಂದ 15 ಸಾವಿರ ಕೋಟಿ ರೂ.ಗಳು ನಷ್ಟವಾಗುತ್ತಿದ್ದು, ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಎಂದರು.

ಹುಲಿ ಸೆರೆಗೆ ಅರಣ್ಯ ಇಲಾಖೆಗೆ ಸೂಚನೆ

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಾಳೆ ಅರಣ್ಯ ಇಲಾಖೆಯೊಂದಿಗೆ ಸಭೆ ನಿಗಧಿಯಾಗಿದೆ. ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಅರಣ್ಯಗಳಿಂದ ಜನರ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಹುಲಿಯನ್ನು ಸೆರೆಹಿಡಿಯಲು ಸಿಬ್ಬಂದಿ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಸೆರೆಹಿಡಿದ ಹುಲಿಗಳನ್ನು ಮತ್ತೊಂದು ಅರಣ್ಯ ಪ್ರದೇಶಕ್ಕೆ ವರ್ಗಾಯಿಸಲು ಸೂಚಿಸಲಾಗಿದೆ ಎಂದರು.

ನನ್ನ ದಾಖಲೆ ಮುರಿಯುವ ನಾಯಕರೂ ಬರಬಹುದು

ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ಅರಸು ರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದೇನೆ ಎಂದರು.