BESCOM Vigilance Force constable dies
ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೆಸ್ಕಾಂ ಜಾಗೃತ ದಳ ಪೊಲೀಸ್ ಠಾಣೆ ಪೇದೆ ಮನು(33) ಮೃತಪಟ್ಟಿದ್ದು, ಕುಟುಂಬಸ್ಥರು ಮೃತದೇಹದ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಮೇ 28 ರಂದು ಬೆಂಗಳೂರಿನಲ್ಲಿನ ಇಲಾಖೆಯ ಮುಖ್ಯ ಕಚೇರಿಗೆ ಕೆಲಸದ ನಿಮಿತ್ತ ಹೋಗಿ ಬೈಕ್ನಲ್ಲಿ ವಾಪಸ್ಸಾಗುತ್ತಿದ್ದಾಗ ವೆಂಕಟಗಿರಿಕೋಟೆ ಕ್ರಾಸ್ ರಸ್ತೆಯಲ್ಲಿ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದ್ದು ಈ ಅಪಘಾತದಲ್ಲಿ ಮನುವಿನ ತಲೆಗೆ ಗಂಭೀರ ಗಾಯವಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಜೂ.1ರಂದು ಮೃತಪಟ್ಟಿದ್ದಾರೆ.
ನೋವಿನಲ್ಲೂ ಕುಟುಂಬಸ್ಥರು ಮೃತದೇಹದ ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿ ವಿವಿಧ ಅಂಗಾಂಗ ದಾನ ಮಾಡಿದ್ದಾರೆ. ಅಂತ್ಯಕ್ರಿಯೆ ಸೂಲುಕುಂಟೆಯಲ್ಲಿ ಪೊಲೀಸ್ ಗೌರವದೊಂದಿಗೆ ನೆರವೇರಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮೃತರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸ್ವಾಂತನ ಹೇಳಿದರು.