ಕೊನೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಮಂಕಾಳ ವೈದ್ಯರಿಗೆ ಕೊಕ್, ಎಸ್.ಎಸ್. ಮಲ್ಲಿಕಾರ್ಜುನ್ಗೆ ಜಾಕ್ಪಾಟ್! Mankala Vaidya
- ಸಚಿವ ಸಂಪುಟ ವಿಸ್ತರಣೆಯ ಕಡೇ ಕ್ಷಣದ ಬದಲಾವಣೆಯಲ್ಲಿ ಮಂಕಾಳು ವೈದ್ಯ ಅವರಿಗೆ ಕೊಕ್ ನೀಡಿ ಎಸ್ ಎಸ್ ಮಲ್ಲಿಕಾರ್ಜುನ್ ಅವರಿಗೆ ಸ್ಥಾನ
- ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಸಮಾರಂಭ ಇಂದು ಸಂಜೆ ನಾಲ್ಕು ಗಂಟೆಗೆ ರಾಜಭವನದಲ್ಲಿ ಆರಂಭ
- ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲು ನಿರ್ಧರಿಸಿದ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳು ವೈದ್ಯ
- ಸಂಪುಟ ವಿಸ್ತರಣೆಯಲ್ಲಿ ಜಿ ಎಸ್ ಪಾಟೀಲ್ ಸ್ಪೀಕರ್ ಹಾಗೂ ಪೊನ್ನಣ್ಣ ಉಪ ಸಭಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಅಂತಿಮ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ಸೇರುವ ನೂತನ ಸಚಿವರು ಯಾರೆಂಬ ಕುತೂಹಲಕ್ಕೆ ಇಂದು ತೆರೆಬಿದ್ದಿದೆ. ಇಂದು ಸಂಜೆ 4 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಅದಕ್ಕೂ ಮುನ್ನವೇ ಸಂಪುಟ ವಿಸ್ತರಣೆಯಲ್ಲ ಒಂದು ಮಹತ್ವದ ಬಲಾವಣೆ ( Mankala Vaidya ) ನಡೆದಿದೆ.
ಹೌದು, ಆರಂಭದಲ್ಲಿ ಎಐಸಿಸಿ ಬಿಡುಗಡೆ ಮಾಡಿದ 20 ಸಚಿವರ ಪಟ್ಟಿಯಲ್ಲಿ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯರ ಹೆಸರಿತ್ತು. ಆದರೆ, ಕೊನೇ ಕ್ಷಣದಲ್ಲಿ ಟ್ವಿಸ್ಟ್ ಎನ್ನುವಂತೆ ಮಂಕಾಳ ವೈದ್ಯರ ಹೆಸರನ್ನು ಪಟ್ಟಿಯಿಂದ ಕೈಬಿಟ್ಟು ದಾವಣಗೆರೆ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಸ್ಥಾನ ನೀಡಲಾಗಿದೆ. ಇದರಿಂದ ಸಚಿವ ಸ್ಥಾನದ ಆಸೆಯಲ್ಲಿದ್ದ ಮಂಕಾಳ ವೈದ್ಯರಿಗೆ ಭಾರಿ ನಿರಾಸೆ ಉಂಟಾಗಿದೆ.
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಮಂಕಾಳ ವೈದ್ಯರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ಕೈತಪ್ಪಿದ್ದೇಕೆ? ಕೊನೇ ಕ್ಷಣದಲ್ಲಿ ಹೈಕಮಾಂಡ್ ಮಟ್ಟದಲ್ಲಿ ನಡೆದ ಚರ್ಚೆಯೇನು? ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸಿಕ್ಕಿದ್ದರ ಹಿಂದಿನ ಲೆಕ್ಕಾಚಾರ ಏನೆಂಬುದು ಸದ್ಯಕ್ಕೆ ಚರ್ಚೆಯ ವಿಷಯವಾಗಿದೆ.
ನೂತನ ಸಚಿವರ ಪಟ್ಟಿ
7. B. Z. ಜಮೀರ್ ಅಹಮದ್ ಖಾನ್
12. ಎಸ್.ಎಸ್. ಮಲ್ಲಿಕಾರ್ಜುನ್ ( ಆರಂಭದಲ್ಲಿ ಮಂಕಾಳ ವೈದ್ಯರ ಹೆಸರಿತ್ತು)
17. ಶ್ರೀಮತಿ. ಗಾಯತ್ರಿ ಶಾಂತೇಗೌಡ
ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಇಂದು ಸಂಜೆ 4 ಗಂಟೆಗೆ ರಾಜಭವನದಲ್ಲಿ ನಡೆಯಲಿದ್ದು, ಸಿದ್ಧತೆಗಳು ನಡೆಯುತ್ತಿವೆ. ಪಕ್ಷದ ಹೈಕಮಾಂಡ್ ನಾಯಕರು ನೂತನ ಸಚಿವರ ಪಟ್ಟಿಯನ್ನು ಅಂತಿಮಗೊಳಿಸುವಾಗ ಜಾತಿ, ಧರ್ಮ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಹಾಗೂ ವಿವಿಧ ಸಾಮಾಜಿಕ ವರ್ಗಗಳ ನಡುವಿನ ಸಮತೋಲನವನ್ನು ಎಚ್ಚರಿಕೆಯಿಂದ ಪರಿಗಣಿಸಿದ್ದಾರೆ. ಅಲ್ಲದೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿದ್ದ ಆರು ಮಂದಿಗೆ ಪುನಃ ಅವಕಾಶ ಕಲ್ಪಿಸಿಕೊಡಲಾಗಿದೆ. ಸದ್ಯಕ್ಕೆ ನೂತನ ಸಚಿವರು ಯಾರೆಂದು ತಿಳಿದಿದ್ದು, ಇನ್ನೂ ಯಾರಿಗೆ ಯಾವ ಖಾತೆ ಎಂಬ ಸಸ್ಪೆನ್ಸ್ ಮಾತ್ರ ಹಾಗೇ ಉಳಿದಿದೆ.
ಇದೇ ವೇಳೆ ಜಿ.ಎಸ್.ಪಾಟೀಲ್ ಅವರಿಗೆ ಸ್ಪೀಕರ್ ಹಾಗೂ ಪೊನ್ನಣ್ಣ ಅವರಿಗೆ ಉಪ ಸಭಾಧ್ಯಕ್ಷ ಸ್ಥಾನ ಒಲಿಯಲಿದೆ. ಇನ್ನೂ ವಿಧಾನ ಪರಿಷತ್ನ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಹಾಗೂ ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನೂ ಈ ಬಾರಿ ಮಾಜಿ ಸಚಿವೆ ಲಕ್ವ್ಮೀ ಹೆಬ್ಬಾಳ್ಕರ್ ಹಾಗೂ ಎಂ.ಸಿ .ಸುಧಾಕರ್ ಅವರಿಗೆ ಭಾರಿ ನಿರಾಸೆ ಉಂಟಾಗಿದೆ. ಇನ್ನೂ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ ಕೆ.ಎಂ.ಶಿವಲಿಂಗೇಗೌಡರಿಗೆ ಕೊನೆಗೂ ಸಚಿವ ಸ್ಥಾನ ಒಲಿದಿದೆ.
ಜೂನ್ 3 ರಂದು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದಲೂ ಚರ್ಚೆಯಲ್ಲಿದ್ದ ಈ ಸಂಪುಟ ವಿಸ್ತರಣೆಯು ಜುಲೈ 31 ರಂದು ನಡೆಯಬೇಕಿತ್ತು, ಆದರೆ ದೆಹಲಿಯಲ್ಲಿ ನಡೆದ ನಾಯಕರ ಸಭೆಯ ಬಳಿಕ ಇದು ಇಂದಿಗೆ ಮುಂದೂಡಲ್ಪಟ್ಟಿತ್ತು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಸಿಎಂ ಡಿ.ಕೆ. ಶಿವಕುಮಾರ್ ಜೊತೆಗೆ ಸಿದ್ದರಾಮಯ್ಯ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಬಿ.ಕೆ. ಹರಿಪ್ರಸಾದ್ ಅವರು ಈ ಸಂಪುಟ ವಿಸ್ತರಣೆಯ ಸಮಾಲೋಚನಾ ಪ್ರಕ್ರಿಯೆಯಲ್ಲಿ ನೇರವಾಗಿ ಭಾಗವಹಿಸಿದ್ದರು.