ಶಿವಣ್ಣ (44)  
ರಾಜ್ಯ

ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತ

ಪ್ರಮುಖ ಮುಖ್ಯಾಂಶಗಳು

  • ಡಿ.ಹಲಸಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ
  • ಬೈಕ್‌ಗೆ ಕಾರು ಡಿಕ್ಕಿ
ಮಳವಳ್ಳಿ: ತಾಲೂಕಿನ ಡಿ.ಹಲಸಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಗಾಯಗೊಂಡಿದ್ದಾರೆ.
ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಶಿವಣ್ಣ(44) ಮೃತಪಟ್ಟಿದ್ದು, ಅಂತರವಳ್ಳಿ ಗ್ರಾಮದ ಜಯಮ್ಮ ಗಾಯಗೊಂಡಿದ್ದಾರೆ. ಡಿ.ಹಲಸಹಳ್ಳಿ ಬಳಿಯ ಶಿರಡಿ ಸಾಯಿಬಾಬ ಮಂದಿರ ಪಕ್ಕದ ನಾಲಾ ರಸ್ತೆ ಕಡೆಯಿಂದ ಬೈಕ್‌ನಲ್ಲಿ ಹೆದ್ದಾರಿಗೆ ಬಂದಾಗ ಹಲಗೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಸವಾರ ಶಿವಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಗಾಯಾಳು ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.