Biker injured in accident
ಚಿಂತಾಮಣಿ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರುಟಹಳ್ಳಿ ಕ್ರಾಸ್ ಬಳಿ ಶನಿವಾರ ರಾತ್ರಿ 2 ಬೈಕ್ಗಳ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.
ನಗರದ ಎನ್.ಆರ್ ಬಡಾವಣೆಯ ಶ್ರೀನಿವಾಸ ಗಾಯಾಳು. ಹಾಲಿನ ಕೇಂದ್ರದಲ್ಲಿ ಕೆಲಸ ಮುಗಿಸಿ ಬೈಕ್ನಲ್ಲಿ ಮನೆಗೆ ವಾಪಸ್ ಬರುವ ಮಾರ್ಗ ಮಧ್ಯೆ ಅವಡ ಸಂಭವಿಸಿದೆ.
ಶ್ರೀನಿವಾಸ ತಲೆಗೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ನಿಮ್ಹಾನ್ಸ್ಗೆ ದಾಖಲಿಸಲಾಗಿದೆ. ಗಾಯಾಳುವಿನ ಸಂಬಂಧಿ ಕೆ.ಮಹೇಶ್ ನೀಡಿದ ದೂರಿನ ಮೇಲೆ ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.