ಕಲಬುರಗಿ ಜಿಲ್ಲೆ ಆಳಂದನಲ್ಲಿ ಪವಿತ್ರ ರಾವ ಚೈತನ್ಯ ಶಿವಲಿಂಗಕ್ಕೆ ಅಪಮಾನ ಎಸಗಿ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಗಂಭೀರ ಪ್ರಕರಣಗಳ ಹಲವು ಕೇಸ್ಗಳನ್ನು ಹಿಂಪಡೆದಿದ್ದು, ಈ ಆದೇಶ ರದ್ದುಪಡಿಸುವಂತೆ ಒತ್ತಾಯಿಸಿ ಕಲಬುರಗಿ ಜಿಲ್ಲಾ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲರನ್ನು ಮಂಗಳವಾರ ಭೇಟಿ ಮಾಡಿ ಮನವಿಪತ್ರ ಸಲ್ಲಿಸಿತು. ಅಶೋಕ ಬಗಲಿ, ಬಿ.ಜಿ.ಪಾಟೀಲ್, ಡಾ.ಉಮೇಶ ಜಾಧವ್, ಶಶೀಲ್ ನಮೋಶಿ, ಸುನಿಲ್ ವಲ್ಲಾಪುರೆ, ಅಮರನಾಥ ಪಾಟೀಲ್, ಡಾ.ಅವಿನಾಶ ಜಾಧವ್ ಇತರರಿದ್ದರು.
- ರಾಘವ ಚೈತನ್ಯ ಶಿವಲಿಂಗಕ್ಕೆ ಅಪಮಾನ
ಕಲಬುರಗಿ: ಜಿಲ್ಲೆಯ ಆಳಂದನಲ್ಲಿ ಪವಿತ್ರ ರಾವ ಚೈತನ್ಯ ಶಿವಲಿಂಗಕ್ಕೆ ಅಪಮಾನ ಎಸಗಿ, ಕೋಮು ಉದ್ವಿಗ್ನತೆ ಸೃಷ್ಟಿಸಿದ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದ ಹಾಗೂ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಗಂಭೀರ ಪ್ರಕರಣಗಳ ಹಲವು ಕೇಸ್ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ಖಂಡಿಸಿ, ಈ ಆದೇಶ ರದ್ದುಪಡಿಸುವಂತೆ ಒತ್ತಾಯಿಸಿ ಕಲಬುರಗಿ ಜಿಲ್ಲಾ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿತು.
ಇಂತಹ ಸಮಾಜ ವಿರೋಧಿ ಹಾಗೂ ಕ್ರಿಮಿನಲ್ ತತ್ವಗಳ ಬೆನ್ನಿಗೆ ನಿಲ್ಲುವ ಮೂಲಕ ಕಾಂಗ್ರೆಸ್ ಸರ್ಕಾರ ಜನವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಈ ಹಿನ್ನೆಲೆಯಲ್ಲಿ, ಸಂವಿಧಾನ ವಿರೋಧಿ ಹಾಗೂ ಜನವಿರೋಧಿ ಈ ಆದೇಶ ತಣ ರದ್ದುಪಡಿಸುವಂತೆ ಆಗ್ರಹಿಸಿದರು.
ಬಿಜೆಪಿ ಗ್ರಾಮೀಣ ಜಿಲ್ಲಾಧ್ಯ ಅಶೋಕ ಬಗಲಿ ನೇತೃತ್ವದಲ್ಲಿನ ನಿಯೋಗದಲ್ಲಿ ವಿಧಾನ ಪರಿಷತ್ ವಿರೋಧ ಪದ ಉಪನಾಯಕ ಸುನಿಲ್ ವಲ್ಯಾಪುರೆ, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ, ಬಿ.ಜಿ.ಪಾಟೀಲ್, ಶಾಸಕ ಡಾ.ಅವಿನಾಶ ಜಾಧವ್, ಮಾಜಿ ಸಂಸದ ಡಾ.ಉಮೇಶ ಜಾಧವ್, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ಮುಖಂಡರಾದ ಶರಣಪ್ಪ ತಳವಾರ, ಶಿವರಾಜ ಪಾಟೀಲ್ ರದ್ದೇವಾಡಗಿ, ಸಂಜಯ್ ಮಿಸ್ಕಿನ್, ನಿತಿನ್ ಗುತ್ತೇದಾರ, ಹರ್ಷಾನಂದ ಗುತ್ತೇದಾರ್, ಲಿಂಗರಾಜ ಬಿರಾದಾರ, ಆನಂದ ಪಾಟೀಲ್, ಬಸವರಾಜ ಬೆಣ್ಣೂರ ಸೇರಿದಂತೆ ಅನೇಕರು ಇದ್ದರು.