ಕನ್ಹೇರಿ ಮಠದ ಅದೃಶ್ಯ ಶ್ರೀಗಳನ್ನು ವಿವಿಧ ಜಿಲ್ಲೆಯಳಿಗೆ ಪ್ರವೇಶ ನಿರ್ಬಂಧಿಸಿದ ಸರ್ಕಾರದ ಆದೇಶವನ್ನು ಖಂಡಿಸಿ ಸಿ.ಸಿ. ಪಾಟೀಲ ನೇತೃತ್ವದಲ್ಲಿ ಜಿಲ್ಲಾಡಳಿತ ಭವನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿಜಯಪುರದ ಕೈವಲ್ಯ ಕುಟೀರ ಪ್ರಣವಪ್ರಕಾಶ ಮಹಾರಾಜರು, ಕನಕನಾಳದ ಗಿರೀಶಾನಂದ ಮಹಾರಾಜರು, ಹಂಸನೂರಿನ ಶ್ರೀ ಅಭಿನವ ಬಸವರಾಜೇಂದ್ರ ಶ್ರೀಗಳು, ಕನ್ನೂರಿನ ಗಿರಿಮಲ್ಲೇಶ್ವರ ಮಹಾರಾಜರು, ಕನ್ನೂರಿನ ಸದಾಶಿವ ಮಹಾರಾಜರು, ಸಿದ್ದಾಪೂರದ ಅರವಿಂದ ಮಹಾರಾಜರು, ಬಸವನಬಾಗೆವಾಡಿಯ ಅಭಿಯಾನಂದ ಮಹಾರಾಜರು, ಲಿಂಗದಾಳದ ಚೆನ್ನಮಲ್ಲಿಕಾರ್ಜುನ ಮಹಾರಾಜರು, ರಾಜು ಕುರಡಗಿ, ಎಸ್. ವಿ. ಸಂಕನೂರ, ವಿಜಯಕುಮಾರ ಗಡ್ಡಿ ಇತರರು ಇದ್ದರು.
ಕನ್ಹೇರಿ ಮಠದ ಅದೃಶ್ಯ ಶ್ರೀಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಶಾಸಕ ಸಿ.ಸಿ. ಪಾಟೀಲ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಜರುಗಿತು. ನಗರದ ಚೆನ್ನಮ್ಮ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮುಳಗುಂದ ನಾಕಾ ಮಾರ್ಗವಾಗಿ ಜಿಲ್ಲಾಡಳಿತ ಭವನ ತಲುಪಿತು. ಜಿಲ್ಲಾಡಳಿತ ಭವನ ಮುಂಭಾಗದಲ್ಲಿ ಬೃಹತ್ ಪ್ರತಿಟಣೆ ನಡೆಸಿ ಕಾರ್ಯಕರ್ತರು ನಿರ್ಬಂಧ ತೆರವುಗೋಳಿಸುವಂತೆ ಆಗ್ರಹಿಸಿ ಜಿಲ್ಲಾಡಳಿತ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಶಾಸಕ ಸಿ. ಸಿ ಪಾಟೀಲ ಮಾತನಾಡಿ, ಕಾಡಸಿದ್ದೇಶವರ ಶ್ರಿಗಳು ರೈತರಿಗೆ ಸಾವಯವ ಕೃಷಿಯಲ್ಲಿ ಯಾವ ರೀತಿ ಬದಲಾವಣೆ, ಸುಧಾರಣೆ ತರಬೇಕು ಎನ್ನುವುದನ್ನು ಹೇಳಿ ಕೋಡುತ್ತಾರೆ. ಗಭಿರ್ಣಿಯರಿಗೆ ಸಂಸ್ಕಾರದ ಪಾಠ, ಯುವಕರಿಗೆ ಸಂಸತಿಯ ನೀತಿ ಪಾಠಗಳನ್ನು ಹೇಳುತ್ತಾರೆ. ಸರ್ಕಾರ ಮಾಡದ ಕೆಲಸವನ್ನು ಶ್ರೀಗಳು ಮಾಡುತ್ತಿದ್ದಾರೆ. ಅವರು ಹಿಂದೂತ್ವವಾದಿ ಎನ್ನುವ ಒಂದೇ ಒಂದು ಕಾರಣಕ್ಕೆ ಅವರಿಗೆ ವಿವಿಧ ಜಿಲ್ಲೆಗಳಲ್ಲಿ ನಿರ್ಬಂಧ ಹೇರಿದ್ದು ಸರಿಯಲ್ಲ. ಸರ್ಕಾರ ಅವರಿಗೆ ನಿರ್ಬಂಧ ಹೇರಿರಬಹುದು. ಆದರೆ, ಭಕ್ತರ ಮನಸ್ಸಿನಲ್ಲಿ ಅವರು ಅಚ್ಚಳಿಯದೇ ಉಳಿದಿದ್ದಾರೆ. ಅವರ ಮೇಲೆ ನಿರ್ಬಂಧ ತೆರವುಗೋಳಿಸಿ ಮುಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದರು.
ದಬ್ಬಾಳಿಕೆಯಿಂದ ರಾಜ್ಯದಲ್ಲಿ ಆಡಳಿತ ನಡೆಸುವುದು ಸರಿಯಲ್ಲ. ಅಧಿಕಾರ ಶಾಶ್ವತವಲ್ಲ. ಮುಖ್ಯಮಂತ್ರಿಗಳು ಅದೃಶ್ಯ ಶ್ರೀಗಳ ಮಠಕ್ಕೆ ಒಮ್ಮೆ ಭೇಟಿ ನೀಡಬೇಕು. ಆಗ ಸರ್ಕಾರ ಮಾಡುವುದು ತಪ್ಪು ಎಂದು ಅನಿಸುತ್ತೆ ಎಂದರು.
ಶ್ರೀ ಪ್ರಶಾಂತ ಮಹಾರಾಜರು ಮಾತನಾಡಿ, ಸನಾತನ ಧರ್ಮದ ರಕ್ಷಣೆಯನ್ನು ಕಾಡಸಿದ್ದೇಶ್ವರ ಶ್ರೀಗಳು ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ನಿರ್ಬಂಧ ಹೇರಲಾಗುತ್ತಿದೆ. ಸ್ವಾಮಿಜೀಗಳಿಗೆ ನಿರ್ಬಂಧ ಹಾಖುವ ದುಷ್ಟ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಹಿಂದೆ ನಮ್ಮನ್ನು ಹಲವು ದಶಕಗಳ ಕಾಲ ಆಳಿದ ಮೋಲರು, ಡಚ್ಚರು, ಪೋರ್ಚಗಿಸರಿಗೆ ನಮ್ಮ ಧರ್ಮಕ್ಕೆ ಏನೂ ಮಾಡಲಾಗಲಿಲ್ಲ. ಕೇವಲ ಕಾಂಗ್ರೆಸ್ ಸರ್ಕಾರ ಏನು ಮಾಡಲು ಸಾಧ್ಯವಿಲ್ಲ ಎಂದರು.
ಈ ಪ್ರತಿಭಟನೆಯಲ್ಲಿ ವಿಜಯಪುರದ ಕೈವಲ್ಯ ಕುಟೀರ ಪ್ರಣವಪ್ರಕಾಶ ಮಹಾರಾಜರು, ಕನಕನಾಳದ ಗಿರೀಶಾನಂದ ಮಹಾರಾಜರು, ಹಂಸನೂರಿನ ಶ್ರೀ ಅಭಿನವ ಬಸವರಾಜೇಂದ್ರ ಶ್ರೀಗಳು, ಕನ್ನೂರಿನ ಗಿರಿಮಲ್ಲೇಶ್ವರ ಮಹಾರಾಜರು, ಕನ್ನೂರಿನ ಸದಾಶಿವ ಮಹಾರಾಜರು, ಸಿದ್ದಾಪೂರದ ಅರವಿಂದ ಮಹಾರಾಜರು, ಬಸವನಬಾಗೆವಾಡಿಯ ಅಭಿಯಾನಂದ ಮಹಾರಾಜರು, ಲಿಂಗದಾಳದ ಚೆನ್ನಮಲ್ಲಿಕಾರ್ಜುನ ಮಹಾರಾಜರು, ರಾಜು ಕುರಡಗಿ, ಎಸ್. ವಿ. ಸಂಕನೂರ, ವಿಜಯಕುಮಾರ ಗಡ್ಡಿ, ರಾು ಯಳವತ್ತಿ, ಸುದೀರ ಖಾಟಗೇರ, ರವಿ ವಗ್ಗಣ್ಣನವರ ಇತರರು ಇದ್ದರು.