ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ 
ರಾಜ್ಯ

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರಿಗೆ ನಿರ್ಗಮಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜನೆ ಮಾಡಲಾಗಿದೆ ಎಂದು ಕೆಪಿಸಿಸಿ ಕಾಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ತಿಳಿಸಿದರು.
ಅರಮನೆ ಮೈದಾನದಲ್ಲಿ ಭಾನುವಾರ ನಡೆಯಲಿರುವ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಪದಗ್ರಹಣ ಕಾರ್ಯಕ್ರಮದ ಪೂರ್ವಸಿದ್ದತೆ ಪರಿಶೀಲನೆ ನಡೆಸಿದ ಜಿ.ಸಿ. ಚಂದ್ರಶೇಖರ್, ಆನಂತರ ಸುದ್ದಿಗೋಷ್ಠಿ ನಡೆಸಿದರು.
ಕೆಪಿಸಿಸಿ ಅಧ್ಯಕ್ಷರ ಜವಾಬ್ದಾರಿ ಹಸ್ತಾಂತರ ಸಮಾರಂಭ ಬೆಳಗ್ಗೆ 10.30ಕ್ಕೆ ಶುರುವಾಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ.