ವಿಭಾಗೀಯ ರೈಲ್ವೆ ಆಸ್ಪತ್ರೆಯಲ್ಲಿ ಮಲ್ಲೇಶ್ವರಂ ಸ್ವಯಂಪ್ರೇರಿತ ರಕ್ತ ನಿಧಿ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆಶುತೋಷ್ ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.  
ರಾಜ್ಯ

ಬೆಂಗಳೂರು ವಿಭಾಗೀಯ ರೈಲ್ವೆ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ಸ್ವಯಂ ಪ್ರೇರಿತ ರಕ್ತನಿಧಿ ಸಹಯೋಗದಲ್ಲಿ 44 ಯೂನಿಟ್ ರಕ್ತ ಸಂಗ್ರಹ

ಬೆಂಗಳೂರು : ಬೆಂಗಳೂರು ವಿಭಾಗೀಯ ರೈಲ್ವೆ ಆಸ್ಪತ್ರೆಯು ಮಲ್ಲೇಶ್ವರಂ ಸ್ವಯಂಪ್ರೇರಿತ ರಕ್ತ ನಿಧಿಯ ಸಹಯೋಗದೊಂದಿಗೆ ಸೋಮವಾರ ಬೆಂಗಳೂರಿನ ವಿಭಾಗೀಯ ರೈಲ್ವೆ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು.

ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆಶುತೋಷ್ ಕುಮಾರ್ ಸಿಂಗ್ ಶಿಬಿರವನ್ನು ಉದ್ಘಾಟಿಸಿದರು. ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದ ರೈಲ್ವೆ ಸಿಬ್ಬಂದಿಯನ್ನು ಅಭಿನಂದಿಸಿದರು. ರಕ್ತದಾನ ಶಿಬಿರದಲ್ಲಿ ಒಟ್ಟು 44 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ರಕ್ತದಾನ ಮಾಡಿದ ಸಿಬ್ಬಂದಿಗಳಿಗೆ ಅಭಿನಂದನಾ ಪ್ರಮಾಣಪತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳಾದ ಪ್ರವೀಣ್ ಕಾತರಕಿ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಡಾ. ಕಿಶೋರ್ ಕುಮಾರ್, ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ.ಸಿದ್ದಪ್ಪ, ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ.ವಿಶ್ವನಾಥ್, ಮಲ್ಲೇಶ್ವರಂ ಸ್ವಯಂಪ್ರೇರಿತ ರಕ್ತ ನಿಧಿಯ ಡಾ. ಮಾಲಾ ಹಾಗೂ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.