ಲಿಂಗರಾಜು 
ರಾಜ್ಯ

ಸುಳಿಗೆ ಸಿಲುಕಿ ನಾಪತ್ತೆಯಾಗಿದ್ದವನ ಶವ ಪತ್ತೆ

ಹನೂರು: ತಾಲೂಕಿನ ಹೊಗೇನಕಲ್ ಫಾಲ್ಸ್‌ನಲ್ಲಿ ಈಜಲು ನೀರಿಗೆ ಇಳಿದಿದ್ದ ವೇಳೆ ಸುಳಿಗೆ ಸಿಲುಕಿ ನಾಪತ್ತೆಯಾಗಿದ್ದ ವ್ಯಕ್ತಿ ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ಮಡಿಲು ಹೋಟೆಲ್ ಮಾಲೀಕ ಲಿಂಗರಾಜು (42) ಮೃತರು. ಭಾನುವಾರ ಪತ್ನಿ ಹಾಗೂ ಪುತ್ರನೊಂದಿಗೆ ಮಹದೇಶ್ವರಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಹೊಗೇನಕಲ್ ಫಾಲ್ಸ್‌ಗೆ ತೆರಳಿದ್ದರು. ಈ ವೇಳೆ ಈಜಲು ನೀರಿಗೆ ಇಳಿದಿದ್ದಾಗ ಲಿಂಗರಾಜು ಸುಳಿಗೆ ಸಿಲುಕಿ ನಾಪತ್ತೆಯಾಗಿದ್ದರು.
ಸುದ್ದಿ ತಿಳಿದು ಮ.ಬೆಟ್ಟದ ಪೊಲೀಸರು ಆಗಮಿಸಿ ಪರಿಶೀಲಿಸಿದ್ದರು. ನುರಿತ ಈಜುಗಾರರಿಂದ ಸಂಜೆವರೆಗೂ ಕುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗ್ಗೆ 8ರ ವೇಳೆಯಲ್ಲಿ ಲಿಂಗರಾಜು ಶವ ಪತ್ತೆಯಾಗಿದೆ. ಮ.ಬೆಟ್ಟದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿದರು. ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು.