Bolero injured in collision
ಚಿಂತಾಮಣಿ: ನಗರದ ಹೊರವಲಯದ ಬೆಂಗಳೂರು ಜೋಡಿ ರಸ್ತೆಯ ಕನ್ನಂಪಲ್ಲಿ ಡೇರಿ ಬಳಿ ಮಂಗಳವಾರ ಸಂಜೆ ಬೊಲೆರೋ ಹಾಗೂ ಕಾರಿಗೆ ನಡುವೆ ಡಿಕ್ಕಿಯಾಗಿ, ಕಾರಿನಲ್ಲಿದ್ದ ಚಿಂತಾಮಣಿಯ ವೈದ್ಯ ಡಾ.ಅವಿನಾಶ್ ಮತ್ತು ಸ್ನೇಹಿತನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ವೇಗವಾಗಿ ಬಂದ ಬೊಲೆರೋ, ಕಾರಿಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕದಲ್ಲಿದ್ದ ಕಂಬಕ್ಕೆ ಡಿಕ್ಕಿಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಬೊಲೆರೋ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾನೆ.
ಅಪಘಾತದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.