ವಿಜಯಪುರ ಜಿಲ್ಲಾಡಳಿತ ಕಚೇರಿಯಲ್ಲಿ ಪೊಲೀಸ್ ಇಲಾಖೆಯ ಶ್ವಾನದಳದ ಸಿಬ್ಬಂದಿ ಪರಿಶೀಲನೆ ನಡೆಸಿದರು.
- ಬಾಂಬ್ ಬೆದರಿಕೆ ಸಂದೇಶ ತಂದ ಆತಂಕ
- ಬೆಚ್ಚಿ ಬಿದ್ದ ಜನ-ಜಿಲ್ಲಾಡಳಿತ ಕಚೇರಿ ಸಿಬ್ಬಂದಿ
- ಪೊಲೀಸರಿಂದ ಚುರುಕಿನ ಕಾರ್ಯಾಚರಣೆ
- ಶ್ವಾನದಳದೊಂದಿಗೆ ಬೀಡು ಬಿಟ್ಟ ಖಾಕಿ ಪಡೆ
ವಿಜಯಪುರ: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ !
ಡಿ. 16 ರಂದು ಬೆಳಗ್ಗೆ 6.58ಕ್ಕೆ ಜಿಲ್ಲಾಧಿಕಾರಿ ಕಚೇರಿಯ ಇ-ಮೇಲ್‌ಗೆ ಇಂಥದ್ದೊಂದು ಸಂದೇಶ ಬಂದಿದೆ. ಅದರಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶವಿದೆ.
ಈ ಬಗ್ಗೆ ಫುಲ್ ಅಲರ್ಟ್ ಆದ ಜಿಲ್ಲಾಡಳಿತ ಪೊಲೀಸ್ ಇಲಾಖೆಗೆ ಮಾಹಿತಿ ರವಾನಿಸಿದೆ. ಪೊಲೀಸ್ ಇಲಾಖೆಯ ಬಾಂಬ್ ನಿಷ್ಕ್ರೀಯ ದಳದ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ ಸಹಿತ ಆಗಮಿಸಿದ್ದು ಸಮಗ್ರವಾಗಿ ಪರಿಶೀಲನೆ ನಡೆಸಲಾಗುತ್ತಿದೆ.
ವಿಜಯಪುರ ಜಿಲ್ಲಾಡಳಿತ ಕಚೇರಿಯಲ್ಲಿ ಪೊಲೀಸ್ ಇಲಾಖೆಯ ಶ್ವಾನದಳದ ಸಿಬ್ಬಂದಿ ಪರಿಶೀಲನೆ ನಡೆಸಿದರು.
ನಗರ ವಲಯದ ಡಿವೈಎಸ್‌ಪಿ, ಡಿಎಆರ್ ವಿಭಾಗದ ಡಿವೈಎಸ್‌ಪಿ ಹಾಗೂ ಗೋಳಗುಮ್ಮಟ ಸಿಪಿಐ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿತು. ಸಾರ್ವಜನಿಕರು ಹಾಗೂ ಸರ್ಕಾರಿ ಸಿಬ್ಬಂದಿ ಯಾವುದೇ ಕಾರಣಕ್ಕೆ ಭಯ ಪಡುವ ಅಗತ್ಯವಿಲ್ಲವೆಂದು ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರ ತಿಳಿಸಿದ್ದಾರೆ.