ಕನ್ನಡ ಅಭಿವೃದ್ಧಿ ಪ್ರಾಧಿಕಾರ 
ರಾಜ್ಯ

ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಪ್ರಮುಖ ಮುಖ್ಯಾಂಶಗಳು

  • ಕನ್ನಡ ಪುಸ್ತಕ ಪ್ರಾಧಿಕಾರ
  • ಶೇ.50 ರಿಯಾಯಿತಿ
ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಜನವರಿ ತಿಂಗಳು ಪೂರ್ತಿ ಪುಸ್ತಕಗಳ ಖರೀದಿ ಮೇಲೆ ಶೇ.50 ರಿಯಾಯಿತಿ ಘೋಷಿಸಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 700ಕ್ಕೂ ಅಧಿಕ ಶೀರ್ಷಿಕೆಗಳಡಿ ಕೃತಿಗಳನ್ನು ಪ್ರಕಟಿಸಿದೆ. ಈ ಕೃತಿಗಳನ್ನು ಜನಸಾಮಾನ್ಯರಿಗೆ ಕೈಗೆಟುಕುವ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶದೊಂದಿಗೆ ಎಲ್ಲ ಪುಸ್ತಕಗಳ ಮೇಲೆ ಶೇ.50 ರಿಯಾಯಿತಿ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ, ಎಲ್ಲ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಪ್ರಾಧಿಕಾರದಿಂದ ತೆರೆಯಲಾದ ಎಲ್ಲ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಇರಲಿದೆ. ಪ್ರಾಧಿಕಾರದ ಜಾಲತಾಣ https://kpp.karnataka.gov.in ಮೂಲಕವೂ ಖರೀದಿಸಬಹುದು.