Boy dies after being struck by lightning
ಚಿಂತಾಮಣಿ: ಮಿಂಡಿಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಗವಗೋಳ್ಳಹಳ್ಳಿಯಲ್ಲಿ ಬುಧವಾರ ರಾತ್ರಿ ಸಿಡಿಲು ಬಾಲಕ ಮೃತಪಟ್ಟಿದ್ದಾನೆ.
ಮುನಿಯಪ್ಪ ಮತ್ತು ಮಮತಾ ದಂಪತಿಯ ಪುತ್ರ ವಿನಯ್ (15) ಮೃತ. ರಾತ್ರಿ ಮನೆಯಲ್ಲಿ ಊಟ ಮಾಡಿ ತಟ್ಟೆ ತೊಳೆಯಲು ಮಳೆ ನಡುವೆ ಹೊರಗೆ ಬಂದಾಗ ಸಿಡಿಲು ಬಡಿದಿದೆ. ಕಿರುಚಿಕೊಂಡ ವಿನಯ್ ಕುಸಿದು ಬಿದ್ದಿದ್ದಾನೆ. ತಕ್ಷಣ ಕುಟುಂಬಸ್ಥರು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರಾದರೂ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ. ಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ.
ವಿನಯ್ ಕೆಂಚಾರ್ಲಹಳ್ಳಿ ಬಾಪೂಜಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಯುಗಾದಿ ಸಂಭ್ರಮದಲ್ಲಿರಬೇಕಾದ ಕುಟುಂಬದಲ್ಲೀಗ ಸೂತಕದ ಛಾಯೆ ಆವರಿಸಿದೆ.